ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರ ಮಾದರಿಯ ಯಾವುದೇ ರೀತಿ ರಾಜಕೀಯ ಬೆಳವಣಿಗೆಗಳು ನಡೆಯುವುದಿಲ್ಲ. ನಮ್ಮಲ್ಲಿ ಯಾರೂ ಕೂಡ ಏಕನಾಥ ಶಿಂಧೆ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್. ಸಿ. ಮಹಾದೇವಪ್ಪ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರು ಒಟ್ಟಾಗಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸರ್ಕಾರ ಸಂಪೂರ್ಣ ಸುಭದ್ರವಾಗಿದೆ ಎಂದರು.
ಡಿ.ಕೆ. ಶಿವಕುಮಾರ್ ಈಶ ಫೌಂಡೇಶನ್ ಕಾರ್ಯಕ್ರಮಕ್ಕೆ ಹೋಗಿದ್ದರು. ಇದರ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಇದಕ್ಕೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇಲ್ಲ. ಸಚಿವ ಕೆ.ಎನ್. ರಾಜಣ್ಣ ಏನು ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು.
ಎಸ್‌ಸಿಪಿ/ ಟಿಎಸ್‌ಪಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಬಿಜೆಪಿಯಿಂದ ಜನಾಂದೋಲನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ‘ಕೇವಲ ರಾಜಕೀಯಕ್ಕಾಗಿ ಹೋರಾಟ ಮಾಡುವುದಲ್ಲ. ಕಾಯ್ದೆ ಮಾಡಿರುವುದೇ ನಾವು. ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ಕಾಯ್ದೆ ಜಾರಿ ಮಾಡಿದ್ದೇವೆ. ನಾವು ತಂದಿರುವ ಕಾಯ್ದೆಗಳು ಇಡೀ ದೇಶಕ್ಕೆ ಮಾದರಿ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರುವ ಕೆಲಸವನ್ನು ಬಿಜೆಪಿ ನಾಯಕರು ಮಾಡಲಿ. ಇತರೆ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಲ್ಲಿ ಎಸ್‌ಸಿಪಿ/ ಟಿಎಸ್‌ಪಿ ಕಾಯ್ದೆ ಜಾರಿ ಮಾಡುವ ಬದ್ಧತೆಯನ್ನು ಬಿಜೆಪಿ ನಾಯಕರು ತೋರಲಿ. ಅದನ್ನು ಬಿಟ್ಟು ರಾಜಕೀಯ ಲಾಭಕ್ಕಾಗಿ ಮಾತನಾಡಬಾರದು ಎಂದರು.
ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್ ಬೇರೆ ಕಾಂಗ್ರೆಸ್ ನಾಯಕರಂತಲ್ಲ. ಬೇಕಾಗಿರುವುದನ್ನು ಒದ್ದು ಕಿತ್ತುಕೊಳ್ಳುವ ಜಾಯಮಾನ. ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಅಷ್ಟೊಂದು ಸುಲಭವಲ್ಲ ಎಂದು ವ್ಯಂಗ್ಯವಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಂಭಮೇಳಕ್ಕೆ ಹೋಗಬೇಡಿ ಎಂದಿದ್ದರು. ಆದರೂ ಡಿಕೆಶಿ ಕುಂಭಮೇಳಕ್ಕೆ ಹೋದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಹಾಡಿ ಹೊಗಳಿದರು. ನಿಮಗೆ ಧಮ್ಮು, ತಾಕತ್ತಿದ್ದರೆ ಡಿಕೆಶಿಯನ್ನು ಪಕ್ಷದಿಂದ ಸಸ್ಪಂಡ್ ಮಾಡಿ ಎಂದು ಸವಾಲೆಸೆದರು.
ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಮಾತು ಕೇಳಿಬರುತ್ತಿದೆ. ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ್ದರು. ಒಬ್ಬ ಮುಖ್ಯಮಂತ್ರಿಯೇ ಪ್ರಧಾನಿ ಭೇಟಿ ಮಾಡುವುದು ಕಷ್ಟ. ಅಂದರೆ ಈ ಭೇಟಿಗೆ ಏನರ್ಥ ಎಂದರು.
ಡಿಕೆ ಶಿವಕುಮಾರ್ ಬಿಜೆಪಿ ಪಕ್ಷಕ್ಕೆ ಬರುವ ವಿಚಾರವಾಗಿ ನಮ್ಮಲ್ಲಿ ಚರ್ಚೆಯಾಗಿಲ್ಲ. ಮೊದಲು ಅವರನ್ನು ಸಸ್ಪೆಂಡ್ ಮಾಡಲಿ, ಮುಂದೆ ನೋಡೋಣಾ. ನಾವ್ಯಾರು ಡಿಕೆಶಿವಕುಮಾರ್ ಅವರನ್ನು ಪಕ್ಷಕ್ಕೆ ಕರೆದಿಲ್ಲ. ಕೇಂದ್ರದ ನಾಯಕರೇ ಎಲ್ಲ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಶಾಸಕ ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ನಮ್ಮ ಪಕ್ಷ ಸಧೃಢವಾಗಿದ್ದು, ಯಾರ ಅವಶ್ಯಕತೆಯೂ ಇಲ್ಲ. ರಾಜಕೀಯದಲ್ಲಿ ಯಾರಾದರೂ ಬರಬಹುದು, ಯಾರಾರೂ ಹೋಗಬಹುದು. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಜಮೀರ್ ಹೇಳಿಕೆ ನೀಡುತ್ತಾರೆ. ನಿನ್ನ ಸಂಪರ್ಕದಲ್ಲಿದ್ದರೇ ಏನು ಬೇಕಾದರೂ ಮಾಡಪ್ಪ. ನಿನಗೆ ಅಡ್ಡ ಬಂದವರೂ ಯಾರಪ್ಪ ಜಮೀರ್? ಎಂದರು.
ನಾನು ಯಾರ ಮೇಲೂ ದ್ವೇಷ ಮಾಡಲ್ಲ. ಆದರೆ ಕಾಂಗ್ರೆಸ್ ರೀತಿ ಕೀಳುಮಟ್ಟದ ರಾಜಕಾರಣ ಮಾಡಲ್ಲ. ನಮ್ಮನ್ನು ತೋರಿಸಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಭದ್ರ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ. ಮುಂದೆ ಚುನಾವಣೆಗೆ ಹೋಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುತ್ತೇವೆ ಎಂದರು.




