ಆಪ್ ಸೇರಿದ ಉತ್ತರ ಕರ್ನಾಟಕದ ನಾಯಕರು

4 years ago

ಬೆಂಗಳೂರು: ಉತ್ತರ ಕರ್ನಾಟಕದ ಹಲವು ರಾಜಕೀಯ ನಾಯಕರು, ಸಾಮಾಜಿಕ ಹೋರಾಟಗಾರರು ಹಾಗೂ ಗಣ್ಯರು ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ , ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಪಕ್ಷದ ಉಪಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ಖ್ಯಾತ ಕಲಾವಿದ ಪಕ್ಷದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ಸಮ್ಮುಖದಲ್ಲಿ ಆಪ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ರಾಜ್ಯದ ಜನತೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಗೆ ಅಧಿಕಾರ ಕೊಟ್ಟು ಉತ್ತರ ಕರ್ನಾಟಕದ ಅಭಿವೃದ್ಧಿ ಅವುಗಳಿಂದ ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದಾರೆ. ಅಲ್ಲಿನ ನೀರಾವರಿ ಯೋಜನೆಗಳು ಹಲವು ದಶಕಗಳಿಂದ ಹಿನ್ನೆಲೆಗೆ ಬಿದ್ದಿವೆ ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಬಿಡುಗಡೆಯಾದ ಸಾವಿರಾರು ಕೋಟಿ ರೂಪಾಯಿ ಹಣವು ಭ್ರಷ್ಟ ರಾಜಕಾರಣಿಗಳ ಜೇಬು ಸೇರಿದೆ. ಪಾರದರ್ಶಕ ಆಡಳಿತ ನೀಡುವ ಅಮ್‌ ಆದ್ಮಿ ಪಕ್ಷದಿಂದ ಮಾತ್ರ ಉತ್ತರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತಿರುವ ಅಲ್ಲಿನ ನಾಯಕರು ಹಾಗೂ ಜನಸಾಮಾನ್ಯರು ದೊಡ್ಡ ಪ್ರಮಾಣದಲ್ಲಿ ಎಎಪಿ ಸೇರುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಮುಖಂಡರಾದ ಶಿವರಾಯಪ್ಪ ದೊಡ್ಡರಿಯಪ್ಪ ಜೋಗಿನ್‌, ರೈತ ನಾಯಕ ಹಾಗೂ ಬಿಜೆಪಿಯ ಬಾಗಲಕೋಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಮುತ್ತಪ್ಪ ಕೋಮರ್‌, ನಾಗರತ್ನ, ಶಿಕ್ಷಣ ಮತ್ತು ಕಲ್ಯಾಣ ಸೇವೆಗಳ ಸಂಸ್ಥೆಯ ಮುಖ್ಯಸ್ಥ ಅನಿಲ್‌ ಕುಮಾರ್‌ ಬೇಗಾರ್‌, ಯುವ ಜನತಾದಳದ ಮಾಜಿ ಧಾರವಾಡ ಜಿಲ್ಲಾಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಸಂಜೀವ್‌ ಕುಮಾರ್‌ ಕುಲಕರ್ಣಿ, ಕಲ್ಬುರ್ಗಿ ಕಲರವ ಮತ್ತು ಬೆನಕ ಟೈಮ್ಸ್ ಮಾಸಿಕ ಪತ್ರಿಕೆ ಪ್ರಧಾನ ಸಂಪಾದಕ ಸಾ.ಸಿ. ಬೆನಕನಳ್ಳಿ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಗೀತಾ ಮಹಾಂತೇಶ್ ಯಾದಗಿ, ಅಧ್ಯಾಪಕರ ಸಂಘದ ಒಕ್ಕೂಟಗಳ ಸಂಘದ ಅಧ್ಯಕ್ಷರಾದ ಶ್ರೀನಿವಾಸ್‌ ಗೌಡ, ಮುಂಡರಿಗಿ ಪುರಸಭಾ ಸದಸ್ಯರು ಹಾಗು ಮುಂಡರಿಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಸವರಾಜ ರಾಮನಹಳ್ಳಿ, ವಕೀಲರು ಹಾಗೂ ಕುಷ್ಟಗಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹುಲಗಪ್ಪ ಚುರಿ, ಪತ್ರಕರ್ತರು ಹಾಗೂ ಕರ್ನಾಟಕ ರಾಜ್ಯ ಹಾಲುಮತ ಮಹಾಸಭಾ ಸಂಘದ ಯುವ ಘಟಕದ ಅಧ್ಯಕ್ಷರಾದ ಸೋಮಣ್ಣ ಮಲ್ಲೂರು, ಸೊರಬ ತಾಲೂಕು ಸಮಾಜ ಸೇವಕರಾದ ಕೆ.ವೈ.ಚಂದ್ರಶೇಖರ, ಬಾಗಲಕೋಟೆ ಜಿಲ್ಲಾ ರೈತ ಮುಖಂಡ ಕೊಳ್ಳಿ ಹಾಗೂ ಬಿಜಾಪುರ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಲೋನಿ ಸೇರಿದಂದತೆ ಅನೇಕರು ಪಕ್ಷಕ್ಕೆ ಸೇರ್ಪಡೆಯಾದರು.

Leave a Reply