ಬೆಂಗಳೂರು: ಪಕ್ಷದ ಅಧ್ಯಕ್ಷ ಸ್ಥಾನ ಎನ್ನುವುದು ಸುಲಭದ ಮಾತಲ್ಲ. ಅದು ಕಲ್ಲು ಮುಳ್ಳಿನ ಹಾದಿಯಾಗಿದೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಬೇಕಾದರೆ 2-3 ತಿಂಗಳ ಮೊದಲೇ ತಯಾರಿ ಮಾಡಿಕೊಳ್ಳಬೇಕು. ಈಗಿನ ಪರಿಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆಯಿಲ್ಲ. ಒಂದು ವೇಳೆ ಹೈಕಮಾಂಡ್ ಈ ಬಗ್ಗೆ ಸೂಚನೆ ನೀಡಿದರೆ ಆ ಸಂದರ್ಭದಲ್ಲಿ ಪರಿಶೀಲಿಸಲಾಗುವುದು ಎಂದರು.
ಸಚಿವ ಸಂಪುಟ ಪುನರ್ ರಚನೆಯಾಗಬೇಕು ಎಂಬ ಸುದ್ದಿಯಿದೆ. ಆದರೆ ಯಾವಾಗ, ಯಾರನ್ನು ಬದಲಾವಣೆ ಮಾಡಲಾಗುತ್ತದೆ ಎಂಬುದರ ಮಾಹಿತಿ ಇಲ್ಲ. ಮಂತ್ರಿಮಂಡಲ ಪುನರ್ ರಚನೆಯಾಗಬಹುದು ಅಥವಾ ಆಗದೇ ಇರಬಹುದು. ಖಾತೆ ಬದಲಾವಣೆಯ ಬಗ್ಗೆಯೂ ಚರ್ಚೆ ಇದೆ ಎಂದು ಅವರು ಇದೇ ವೇಳೆ ಹೇಳಿದರು.
ಈ ಅವಧಿಗೆ ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. 2028ಕ್ಕೆ ಹಕ್ಕು ಪ್ರತಿಪಾದಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಳ್ಳಿನ ಮೇಲೆ ನಿಂತಂತೆ. ಅದನ್ನು ನಿಭಾಯಿಸುವುದು ಕಷ್ಟದ ಜವಾಬ್ದಾರಿ. ಚರ್ಚೆ ನಡೆಯಬೇಕು, ಎಲ್ಲರ ಸಹಕಾರ ಬೇಕು, ಸದ್ಯಕ್ಕೆ ತಾವು ಅದರ ಕುರಿತು ಚಿಂತನೆ ನಡೆಸಿಲ್ಲ ಎಂದರು.
ದೆಹಲಿಯಲ್ಲಿ ಯಾವುದೇ ತೀರ್ಮಾನವಾದರೂ ಅದೇ ಅಂತಿಮ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗುತ್ತಿರಬೇಕು ಎಂದರು.
ಹಾಸನದಲ್ಲಿ ಡಿ.5 ರಂದು ಸಮಾವೇಶ ನಡೆಯುವ ಬಗ್ಗೆ ಕೇಳಿದ್ದೇನೆ. ಆದರೆ ಹೆಚ್ಚಿನ ಮಾಹಿತಿ ಇಲ್ಲ. ಸಮಾವೇಶದಲ್ಲಿ ಭಾಗವಹಿಸುತ್ತೇನೆ. ಸಿದ್ದರಾಮಯ್ಯ ಬೆಂಬಲಿಗರು ಸಮಾವೇಶ ನಡೆಸುತ್ತಿರುವುದಕ್ಕೆ ವ್ಯಕ್ತಿಪೂಜೆ ಎಂಬ ಟೀಕೆ 12 ವರ್ಷಗಳಿಂದಲೂ ಇದೆ. ಅಭಿಮಾನಿಗಳು ಮಾಡುವ ಕಾರ್ಯಕ್ರಮಕ್ಕೆ ತಡೆ ಹಾಕಲು ಸಾಧ್ಯವಿಲ್ಲ ಎಂದರು.
ಅಹಿಂದ ಕಾರ್ಯಕ್ರಮ ಹಲವು ಸಂದರ್ಭದಲ್ಲಿ ನಡೆಯುತ್ತಲೇ ಇದೆ. ಬಜೆಟ್ ನಂತರ ಸಿದ್ದರಾಮಯ್ಯ ಅವರ ಅಧಿಕಾರ ಬದಲಾವಣೆಯಾಗುತ್ತದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಇದನ್ನು ಹೈಕಮಾಂಡ್ ನಿರ್ಧಾರ ಮಾಡಬೇಕು. ಈ ಸಮಾವೇಶಕ್ಕೂ ಈ ರೀತಿಯ ಚರ್ಚೆಗಳಿಗೂ ಸಂಬಂಧವಿಲ್ಲ ಎಂದರು.




