ಬೆಂಗಳೂರು: ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
“ಶಕ್ತಿ ಯೋಜನೆಯನ್ನು ನಡೆಸುವುದು ಸಾರಿಗೆ ಇಲಾಖೆ ತುಸು ಕಷ್ಟವಾಗುತ್ತಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ” ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಈ ವರದಿಗಳನ್ನು ನಿರಾಕರಿಸಿರುವ ರಾಮಲಿಂಗಾರೆಡ್ಡಿ, ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದು ಮಾಧ್ಯಮಗಳ ನಡೆಯನ್ನು ಖಂಡಿಸಿದ್ದಾರೆ.

ನನ್ನನ್ನು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ. ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಿ ಪ್ರಕಟಿಸಲು ಕೋರಿದ್ದಾರೆ.





