ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಹಾಯ ಯಾಚಿಸಿ ಬಂದ ಮಹಿಳೆಯ ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಹಾಜರಾಗಲು ಸಿಐಡಿ ಅಧಿಕಾರಿಗಳು ಅವರಿಗೆ ನೋಟೀಸ್ ನೀಡಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶದಿಂದ ಕೂಡಿದೆ. ಪ್ರಕರಣ ದಾಖಲಿಸಿದ ಮಹಿಳೆ ಪದೇಪದೇ ಇದೇ ರೀತಿಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಿಸುವ ಪ್ರವೃತ್ತಿ ಹೊಂದಿದ್ದಾರೆ. ಹೀಗಾಗಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಗೊಳಿಸಲು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.
ತಾವು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಹೇಳಿದ್ದಾರೆ.




