ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ದಿಗ್ಗಜ ಹಾಗೂ ಸ್ಟೈಲಿಶ್ ಆಟಗಾರ ವಿರಾಟ್ ಕೋಹ್ಲಿ ಕೇವಲ ಕ್ರೀಡಾಪಟುವಾಗಿ ಮಾತ್ರವಲ್ಲ, ಯಶಸ್ವಿ ಉದ್ಯಮಿಯಾಗಿಯೂ ಗಮನ ಸೆಳೆದಿದ್ದಾರೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡಿರುವ ಅವರು ಬೆಂಗಳೂರಿನಲ್ಲಿ ಪಾಲುದಾರಿಕೆ ಯೊಂದಿಗೆ ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಆದರೆ ಈ ಬಾರ್ ಅಂಡ್ ರೆಸ್ಟೋರೆಂಟ್ ಮಹಾನಗರ ಪಾಲಿಕೆ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದೆ.
ಅಗ್ನಿಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಲ್ಲಿ ನೋಟಿಸ್ ನೀಡಲಾಗಿದೆ.
ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ನಿಯಮಗಳನ್ನು ಪಾಲಿಸಲಾಗಿಲ್ಲ ಎಂಬ ಕುರಿತಂತೆ ಸ್ಥಳೀಯರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ನೋಟಿಸ್ ನೀಡಿದ್ದಾರೆ.
ಇದೇ ಕಾರಣಕ್ಕಾಗಿ ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ದರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ಸಮಜಾಯಿಷಿ ಕೇಳಲಾಗಿದೆ. ಇದಕ್ಕೆ ಸೂಕ್ತ ಉತ್ತರ ಬಾರದೆ ಇದ್ದಲ್ಲಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ.




