ಬಳ್ಳಾರಿ: ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಳ್ಳಬೇಕು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ.
ನೋಂದಣಿ: ಕುಸುಮೆ, ಜೋಳ, ಸೂರ್ಯಕಾಂತಿ, ಮೆಕ್ಕೆ ಜೋಳ ಬೆಳೆಗಳಿಗೆ ಡಿ.16 ಕೊನೆಯ ದಿನ. ಕಡಲೆ ಬೆಳೆಗೆ ಡಿ.31 ಕೊನೆಯ ದಿನ.
ಬೆಳೆಗಳ ವಿಮೆ ನೋಂದಣಿಗೆ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತಿಗಳಿಗೆ ನಿಗದಿಪಡಿಸಿದ್ದು, ನಿಗದಿತ ಘಟಕದಲ್ಲಿ ಬೆಳೆ ನೋಂದಣಿ ಮಾಡಲಾಗುವುದು. ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್ಗಳಿಗೆ ಸಂಪರ್ಕಿಸಬಹುದು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಧಿಗೆ (7996453241) ಸಂಪರ್ಕಿಸಬಹುದು.




