ಬಿಟ್ ಕಾಯಿನ್ ಹಗರಣ ಸಂಬಂಧ ವಿಚಾರಣೆ
ಹ್ಯಾಕರ್ ಶ್ರೀ ಕೃಷ್ಣ ಭಟ್ ಅಲಿಯಾಸ್ ಶ್ರೀಕಿ ಜೊತೆಗೆ ಮೊಹಮ್ಮದ್ ನಲಪಾಡ್ ವ್ಯಾವಹಾರಿಕ ನಂಟು!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಬಿಟ್ ಕಾಯಿನ್ ಹಗರಣದ ಸುಳಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಸಿಲುಕಿದ್ದಾರೆ. ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀ ಕೃಷ್ಣ ಭಟ್ ಅಲಿಯಾಸ್ ಶ್ರೀಕಿ ಜೊತೆಗೆ ಮೊಹಮ್ಮದ್ ನಲಪಾಡ್ ವ್ಯಾವಹಾರಿಕ ನಂಟು ಹೊಂದಿದ್ದಾರೆ ಎಂಬ ಅಂಶವನ್ನು ಪತ್ತೆ ಹಚ್ಚಿರುವ ತನಿಖಾ ತಂಡ ಇವರ ವಿರುದ್ಧ ಪ್ರಕರಣ ದಾಖಲಿಸಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಈ ಹಿಂದೆ ಹಿಂದೆ ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ಮಾಡಲಾಗಿತ್ತು. ಹೇಳಿಕೆ ದಾಖಲು ಮಾಡಿಕೊಂಡ ಬಳಿಕ ಪ್ರಕರಣದಲ್ಲಿ ನಲಪಾಡ್ ಅವರನ್ನೂ ಆರೋಪಿಯನ್ನಾಗಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಿಐಡಿ ಪೋಲೀಸರು ನೋಟಿಸ್ ನೀಡಿದ್ದಾರೆ.
ಸಿಐಡಿ ಅಧಿಕಾರಿಗಳು ನೀಡಿರುವ ನೋಟಿಸ್ ಅನ್ವಯ ವಿಚಾರಣೆಗೆ ಹಾಜರಾದ ಬಳಿಕ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಕಾನೂನು ತಜ್ಞರು ಹೇಳಿರುವ ಹಿನ್ನೆಲೆಯಲ್ಲಿ ನಲಪಾಡ್ ಒತ್ತಡಕ್ಕೆ ಒಳಗಾಗಿದ್ದು, ನೋಟೀಸ್ ರವಾನೆಯಾಗುತ್ತಿದ್ದಂತೆ ಅವರು ಡಿಸಿಎಂ ಹಾಗೂ ತಮ್ಮ ರಾಜಕೀಯ ಗುರು ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ಮಾತುಕತೆ ನಡೆಸಿದ್ದಾರೆ.
ಎಸ್ಐಟಿ ನೋಟೀಸ್ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಅದು ತನಿಖೆಯ ಭಾಗ. ಯಾರನ್ನು ಕರೆಸಬೇಕು, ಯಾರನ್ನು ವಿಚಾರಣೆ ಮಾಡಬೇಕು, ಯಾವ ಮಾಹಿತಿ ಪಡೆಯಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ. ನಾನು ಆ ಕುರಿತು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಒಂದೊಂದು ಹಂತದಲ್ಲಿ ಒಬ್ಬೊಬ್ಬರನ್ನು ಕರೆಸಿ ವಿಚಾರಣೆ ಮಾಡಲಾಗುತ್ತಿದೆ. ಎಲ್ಲದಕ್ಕೂ ನಾನು ಪ್ರತಿಕ್ರಿಯಿಸುವುದು ಸರಿಯಲ್ಲ ಎಂದರು.




