ಬಳ್ಳಾರಿ: ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಕಟ್ಟಡ, ನಿವೇಶನ ಹೊಂದಿರುವ ಆಸ್ತಿ ಮಾಲೀಕರು ಕಡ್ಡಾಯವಾಗಿ ತಮ್ಮ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗ, ಅರೆ ಸರ್ಕಾರಿ, ಸ್ಥಳೀಯ ಸಂಸ್ಥೆಗಳ ಒಡೆತನದಲ್ಲಿರುವ ಸ್ವತ್ತುಗಳನ್ನು ಹೊರತುಪಡಿಸಿ ಇನ್ನುಳಿದ ಕಟ್ಟಡ, ನಿವೇಶನಗಳ ಮಾಲೀಕರು ತಮ್ಮ ಆಸ್ತಿಗಳ ಆಸ್ತಿ ತೆರಿಗೆ ಪಾವತಿಸಬೇಕು.
ಸಂಬಂಧಿಸಿದ ಪೂರಕ ನೋಂದಾಯಿತ ದಾಖಲೆ ಪತ್ರಗಳು, ಸ್ವತ್ತಿನ ಭಾವಚಿತ್ರ, ಮಾಲೀಕರ ಫೋಟೋ, ನಮೂನೆ-15, ವಿದ್ಯುತ್ ಬಿಲ್, ಕುಡಿಯುವ ನೀರಿನ ಬಿಲ್, ಕಟ್ಟಡ ಪರವಾನಗಿ ಮತ್ತು ಅನುಮೋದಿತ ನಕ್ಷೆ, ನಿವೇಶನ ವಿನ್ಯಾಸ ಅನುಮೋದನೆ ಅಥವಾ ಅನುಮೋದಿತ ಬಡಾವಣೆಯ ನಕ್ಷೆ, ಆರ್‌ಟಿಸಿ, ಮ್ಯೂಟೇಶನ್ ನಕಲು ಪ್ರತಿ, ಮಾಲೀಕರ ಆಧಾರ್ ಕಾರ್ಡ್ ಪ್ರತಿ, ಮಾಲೀಕರ ಪಾನ್ ಕಾರ್ಡ್ ಪ್ರತಿ ಅಥವಾ ಚುನಾವಣಾ ಗುರುತಿನ ಚೀಟಿ ಹಾಗೂ ಇತರೆ ಅವಶ್ಯಕ ದಾಖಲಾತಿಗಳನ್ನು ಪುರಸಭೆ ಕಚೇರಿಗೆ ಸಲ್ಲಿಸಿ ಸ್ವತ್ತಿಗೆ ಸಂಬಂಧಪಟ್ಟ ತೆರಿಗೆ ಪಾವತಿಸಬೇಕು.
ಆಸ್ತಿಯನ್ನು ಗಣಕೀಕರಿಸಿಕೊಂಡು ನಮೂನೆ-3, ನಮೂನೆ-3ಎ ಪಡೆದುಕೊಂಡು ನೋಂದಾಯಿತ ಕಚೇರಿಯಲ್ಲಿ ಕ್ರಯ ಪತ್ರ, ದಾನ ಪತ್ರ, ವಿಭಾಗ ಪತ್ರ ಹಕ್ಕು, ಖುಲಾಸೆ ಹಾಗೂ ಇತರೆ ದಾಖಲೆ ಪತ್ರ ನೋಂದಣಿ ಮಾಡಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಬಹುದು.
ತಪ್ಪಿದಲ್ಲಿ ಸಂಬಂಧಪಟ್ಟ ಆಸ್ತಿ ಮಾಲೀಕರಿಗೆ ನಿಯಮ 10ಎರಂತೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಗಳ ಕಚೇರಿ, ಕಂದಾಯ ಶಾಖೆಯ ಕಂದಾಯ ಅಧಿಕಾರಿ ಅಥವಾ ಮೊ.9886362003, 9916907008, 9845509950 ಗೆ ಸಂಪರ್ಕಿಸಬಹುದು.




