ಬಳ್ಳಾರಿ: ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ತಿಳಿಸಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಣಿ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.




