ದಾವಣಗೆರೆ: ರಾಷ್ಟೀಯ ಹೆದ್ದಾರಿ ಪ್ರಾಧಿಕಾರದಿಂದ ಷಟ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕೆಲಸ ದಾವಣಗೆರೆ ಕೆಲವು ಭಾಗದಲ್ಲಿ ಮಾತ್ರ ಬಾಕಿ ಇದ್ದು ಇದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸಬಹುದಾಗಿದ್ದು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದು, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾವಣಗೆರೆ ನಗರಕ್ಕೆ ಹೊಂದಿಕೊಂಡತೆ ಹಾಗೂ ಕುಂದವಾಡ ಬ್ರಿಡ್ಜ್, ಅಗಸನಕಟ್ಟೆ ಬಳಿ ಸರ್ವೀಸ್ ರಸ್ತೆ ಬಾಕಿ ಇದ್ದು, ರೈತರು ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿಸಿದ್ದು ಕಾನೂನು ಪ್ರಕಾರ ರೈತರಿಗೆ ಸಿಗಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಿ ಅಥವಾ ಠೇವಣಿ ಇಟ್ಟು ಕಾಮಗಾರಿ ಮುಂದುವರೆಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿ ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸಿಕೊಡಲಾಗುತ್ತದೆ ಎಂದರು.
ಸರ್ವೀನ್ ರಸ್ತೆ ಕಾಮಗಾರಿ ಬಾಕಿ ಇರುವುದರಿಂದ ಅಪಘಾತಗಳು ಹೆಚ್ಚು ಸಂಭವಿಸಬಹುದಾಗಿದ್ದು ಆದಷ್ಟು ಬೇಗ ಕಾಮಗಾರಿ ಮುಕ್ತಾಯ ಮಾಡಲು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೊಕೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ತಹಸಿಲ್ದಾರ್ ಅಶ್ವಥ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.




