ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆಗೊಂಡ 01 ಅಂಗನವಾಡಿ ಕಾರ್ಯಕರ್ತೆ ಮತ್ತು 05 ಅಂಗನವಾಡಿ ಸಹಾಯಕಿಯರ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಆಗಸ್ಟ್ 08 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ. ಆಕ್ಷೇಪಣೆಗಳನ್ನು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.08392-266080 ಗೆ ಸಂಪರ್ಕಿಸಬಹುದು.




