ಬೆಂಗಳೂರು: ಕುಖ್ಯಾತರ ಗ್ಯಾಂಗ್ ಕಟ್ಟಿಕೊಂಡು ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಹಲವಡೆ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕುಖ್ಯಾತ ಉತ್ತರ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾನೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಫಹೀಮ್ ಅಲಿಯಾಸ್ ಎಟಿಎಂ ಎಂದು ಕರೆಯಲಾಗುತ್ತಿದ್ದ ಈತ ಕೊಲೆ, ದರೋಡೆ, ಅಪಹರಣ ಬೆದರಿಕೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು ಉತ್ತರ ಪ್ರದೇಶ ಸರ್ಕಾರ ಈತನ ವಿರುದ್ಧ ಬುಲ್ಡೋಜರ್ ಕಾಯ್ದೆ ಜಾರಿಗೊಳಿಸಿದೆ.
ಈತನನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು, ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಕೇಳಿ ಬೆಚ್ಚಿ ಬಿದ್ದಿದ್ದಾರೆ. ಆ ಬಳಿಕ ನಟೋರಿಯಸ್ ಆಗಿದ್ದ ಈತನ ಮನೆಯನ್ನು ಬುಲ್ಡೋಜರ್ನಿಂದ ನೆಲಸಮ ಮಾಡಿದೆ.
ನಟೋರಿಯಸ್ ಫಹೀಮ್ ಗ್ಯಾಂಗ್ ಬೆಂಗಳೂರಿನಲ್ಲಿ ಅಷ್ಟೇ ಅಲ್ಲ, ಮಹಾರಾಷ್ಟ್ರ ಆಂಧ್ರ, ಉತ್ತರ ಪ್ರದೇಶದ ವಿವಿಧ ನಗರಗಳೂ ಸೇರಿದಂತೆ ದೇಶದಾದ್ಯಂತ ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾಗಿದ್ದ. ಈತನಿಗಾಗಿ ಬೆಂಗಳೂರು ಪೊಲೀಸರು ಮಾತ್ರವಲ್ಲದೆ, ವಿವಿಧ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ಈ ಹಿಂದೆ ಅಪರಾಧ ಪ್ರರಕಣದಲ್ಲಿ ಜೈಲು ಸೇರಿದ್ದ ಫಹೀಮ್ ಪೆರೋಲ್ ಮೇಲೆ ಹೊರಬಂದಿದ್ದ. ಪೆರೋಲ್ ಮೇಲೆ ಹೊರಗಿದ್ದಾಗಲೇ ಮತ್ತಷ್ಟು ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿದ್ದ.
ಕಳೆದ ಏಪ್ರಿಲ್ 24 ರಂದು ಫಹೀಮ್ ಗ್ಯಾಂಗ್ ಬೆಂಗಳೂರಿನ ಸಹಕಾರನಗರದ ವೈದ್ಯ ಡಾ. ಉಮಾಶಂಕರ್ ಮನೆಗೆ ನುಗ್ಗಿ 40 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿತ್ತು. ಕಳ್ಳತನದ ಬಗ್ಗೆ ಅರಿವಾಗಿ ಪ್ರಶ್ನಿಸಲು ಬಂದ ವೈದ್ಯರಿಗೆ ಗನ್ ತೋರಿಸಿ ಬೆದರಿಸಿ ಗ್ಯಾಂಗ್ ಪರಾರಿಯಾಗಿತ್ತು. ಈ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಈತನ ಬಂಧನಕ್ಕೆ ಕೊಡಿಗೆಹಳ್ಳಿ ಪೊಲೀಸರು ಬಲೆ ಬೀಸಿದ್ದ. ಘಟನೆ ಸಂಬಂಧ ಮೂವರನ್ನು ಈಗಾಗಲೇ ಬಂಧಿಸಿದ್ದರು. ಆದರೆ, ಫಹೀಮ್ ಮಾತ್ರ ಬೆಂಗಳೂರು ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ.
ಈಗ ಉತ್ತರ ಪ್ರದೇಶದ ಮುರ್ದಾಬಾದ್ ಪೊಲೀಸರು ಫಹೀಮ್ ನನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಮನೆಯನ್ನೂ ನೆಲಸಮಗೊಳಿಸಿದ್ದಾರೆ. ಈತನ ಬಂಧನದಿಂದ ದೇಶಾದ್ಯಂತ 65 ಪ್ರಕರಣಗಳ ತನಿಖೆ ಚುರುಕುಗೊಳ್ಳಲಿವೆ. ಫಹೀಮ್ ನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆಯಲು ಕೊಡಿಗೆಹಳ್ಳಿ ಪೊಲೀಸರು ಮುಂದಾಗಿದ್ದಾರೆ.




