ಬೆಂಗಳೂರು: ಗುತ್ತಿಗೆದಾರ ಸಚಿನ್ ಸಾವಿನ ಕುರಿತು ನ್ಯಾಯಾಂಗ ತನಿಖೆ ಆಗಬೇಕು, ಪ್ರಿಯಾಂಕ್ ಖರ್ಗೆಯವರು ಮೊದಲು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಮಕ್ಕಳ ದುರ್ಬಳಕೆ ಸಂಚು ಸೇರಿದಂತೆ ಅನೇಕ ವಿಷಯಗಳು ಸಚಿನ್ ಡೆತ್ ನೋಟಿನಲ್ಲಿವೆ ಎಂದರು.
ತನಿಖೆ ನಡೆಯಲೆಂದು ಮುಂಚಿತವಾಗಿ ತಿಳಿಸಿದರೆ ಬಚಾವ್ ಆಗಬಹುದೆಂದು ಪ್ರಿಯಾಂಕ್ ಅವರು ಪತ್ರಿಕಾಗೋಷ್ಠಿ ಮಾಡಿದ್ದಾರೆ ಎಂದರು.
ಈಶ್ವರಪ್ಪನವರ ರಾಜೀನಾಮೆ ಪಡೆದ ದಾರಿಯಲ್ಲೇ ರಾಜೀನಾಮೆ ಕೊಡಬೇಕು; ನಿಮ್ಮ ಪಾತ್ರ ಏನೂ ಇಲ್ಲ ಎಂದು ಗೊತ್ತಾದರೆ ನೀವು ಮುಖ್ಯಮಂತ್ರಿಯಾದರೂ ನಮ್ಮ ಅಭ್ಯಂತರವಿಲ್ಲ. ನಾವು ಸುಲಭವಾಗಿ ಬಿಡುವುದಿಲ್ಲ. ಹೋರಾಟವನ್ನು ಮುಂದುವರೆಸುತ್ತೇವೆ ಎಂದರು.
ವಿಪಕ್ಷ ನಾಯಕರು, ನಮ್ಮ ಕಾರ್ಯಕರ್ತರ ಮೇಲೆ ಸುಲಭವಾಗಿ ಎಫ್ಐಆರ್ ಆಗುತ್ತಿದೆ. ಆದರೆ, ವಿಪಕ್ಷದವರು ಆಡಳಿತ ಪಕ್ಷದವರ ಮೇಲೆ ದೂರು ನೀಡಿದರೆ, ಎಫ್ಐಆರ್ ಆಗುತ್ತಿಲ್ಲ. ಯಾಕೆ ಎಂದರು.
ಸಿ.ಟಿ.ರವಿಯವರು ಕೊಟ್ಟ ದೂರಿನ ಎಫ್ಐಆರ್ ಮಾಡಿಲ್ಲ; ಎಫ್ಐಆರ್ ಮಾಡದೆ ಅವರನ್ನು ರಾತ್ರಿಯೆಲ್ಲ ಸುತ್ತಾಡಿಸಿದ್ದಾರೆ. ಗುಲ್ಬರ್ಗದಲ್ಲಿ ಕೂಡ ಎಫ್ಐಆರ್ ಮಾಡಿಲ್ಲ; ಕೋರ್ಟ್ ನಿರ್ದೇಶನ ನೀಡಬೇಕಾಯಿತು ಎಂದರು.
ನಾಳೆಯೇ ಬಿಜೆಪಿ ಸತ್ಯಶೋಧನಾ ಸಮಿತಿಯು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ತೂಗಾಂವ್ ಕಟ್ಟೆಗೆ ಭೇಟಿ ಕೊಡಲಿದೆ ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಾನು (ರವಿಕುಮಾರ್), ನಮ್ಮ ಗುಲ್ಬರ್ಗದ ಶಾಸಕ ಬಸವರಾಜ ಮತ್ತಿಮೂಡ, ಬೀದರ್ ಶಾಸಕ ಶೈಲೇಂದ್ರ ಬೆಲ್ದಾಳೆ, ಬಸವಕಲ್ಯಾಣದ ಶಾಸಕ ಶರಣು ಸಲಗಾರ್, ಹುಮ್ನಾಬಾದ್ ಶಾಸಕ ಸಿದ್ದು ಪಾಟೀಲ್, ಬೀದರ್ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್, ಗುಲ್ಬರ್ಗ ಜಿಲ್ಲಾ ಅಧ್ಯಕ್ಷರಾದ ಚಂದು ಪಾಟೀಲ್, ಶಿವರಾಜ್ ಪಾಟೀಲ್ ಅವರು ಈ ಸಮಿತಿಯಲ್ಲಿ ಇರುತ್ತಾರೆ ಎಂದರು.
ನಮ್ಮ ಈ ನಿಯೋಗ ಭಾಲ್ಕಿ ತಾಲ್ಲೂಕಿನ ತೂಗಾಂವ್ ಕಟ್ಟೆಗೆ ನಾಳೆ ಸಂಜೆ ಭೇಟಿ ಕೊಡುತ್ತದೆ. ಸಚಿನ್ ಮನೆಗೆ ತೆರಳಿ ವಿವರ ಪಡೆಯುತ್ತೇವೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕುರಿತು ನಂತರ ತಿಳಿಸುವುದಾಗಿ ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಸರ್ವಾಧಿಕಾರ ತಾಂಡವವಾಡುತ್ತಿದೆ. ಸಿದ್ದರಾಮಯ್ಯನವರು ಪ್ರಜಾಪ್ರಭುತ್ವವಾದಿ, ಸಮಾಜವಾದಿ ಎಂದು ಹೇಳುತ್ತಿದ್ದು, ಅದೆಲ್ಲ ಬೋಗಸ್, ಬೂಸಾ. ಸಚಿನ್ ಬರೆದ ಪತ್ರದ ಮಾಹಿತಿಯ ಇಂಚಿಂಚನ್ನೂ ರಾಜ್ಯದಲ್ಲಿ ನಾವು ಪ್ರಚಾರ ಮಾಡುತ್ತೇವೆ ಎಂದರು.
ಈ ಸರಕಾರಕ್ಕೆ ಮಾನ, ಮರ್ಯಾದೆ ಇದೆಯೇ? ಎಷ್ಟು ಅಧಿಕಾರಿಗಳು ಸಾಯುತ್ತಿದ್ದಾರೆ? ಇನ್ನೂ ಎಷ್ಟು ಜನ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ? ಆಸ್ಪತ್ರೆಗಳು, ಶಾಲೆ, ಕಾಲೇಜುಗಳು ಗಬ್ಬುನಾರುತ್ತಿವೆ. ಹೇಳೋರಿಲ್ಲ; ಕೇಳೋರಿಲ್ಲ ಎಂಬಂತಾಗಿದೆ. ರಸ್ತೆ ಗುಂಡಿಗಳು ಹಾಳು ಬಿದ್ದು ಹೋಗಿದೆ. ಸರಕಾರ ದುಡ್ಡಿಲ್ಲದೆ ಪಾಪರ್ ಆಗಿದೆ. ಸುಮ್ಮನೆ ಭಾಷಣ ಬಿಗಿಯುತ್ತಿದ್ದಾರೆ. ಈ ಸರಕಾರದ ವಿರುದ್ಧ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದರು.




