ಬೆಂಗಳೂರು: ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್ನಿಂದ 524 ಮೀಟರ್ ಗೆ ಹೆಚ್ಚಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರಗಳಲ್ಲಿ ಪ್ರವಾಹವಾಗುತ್ತದೆ ಎಂಬ ಮಹಾರಾಷ್ಟ್ರದ ಆಕ್ಷೇಪಣೆಗೆ ಯಾವುದೇ ತಾತ್ವಿಕ ಆಧಾರವಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟೆ ನಿರ್ಮಾಣಕ್ಕೂ ಮುನ್ನವೇ ಸಾಂಗ್ಲಿ ಭಾಗದಲ್ಲಿ ಪ್ರವಾಹ ಸಂಭವಿಸುತ್ತಿತ್ತು ಎಂಬುದು ದಾಖಲೆಗಳಿಂದ ಸಾಬೀತಾಗಿದೆ. ಅಣೆಕಟ್ಟೆ ಎತ್ತರವನ್ನು ವಿರೋಧಿಸಿ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನ್ಯಾಯಾಧೀಕರಣ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದರೂ, ಅವು ತಿರಸ್ಕೃತಗೊಂಡಿವೆ ಎಂದರು.
ನದಿ ನೀರಿನ ನಮ್ಮ ಹಕ್ಕುಗಳಿಗಾಗಿ ಕರ್ನಾಟಕ ಸದಾ ಹೋರಾಡುತ್ತದೆ ಮತ್ತು ಸೂಕ್ತ ಹಂತಗಳಲ್ಲಿ ತನ್ನ ನಿಲುವು ಸ್ಪಷ್ಟವಾಗಿ ಸ್ಥಾಪಿಸುತ್ತದೆ ಎಂದರು.




