ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಇಬ್ಬರು ಕಿಡಿಗೇಡಿಗಳನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ಗಳು ಬಂದಿದ್ದವು. ಇದರ ವಿರುದ್ಧ ಅವರು ಪೊಲೀಸರಿಗೆ ದೂರು ನೀಡಿ ಮೂರು ದಿನಗಳ ಹಿಂದೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ವಿಜಯಲಕ್ಷ್ಮೀ ನಗರ ಪೊಲೀಸ್ ಕಮೀಷನರ್ ಭೇಟಿ ಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ.
ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ಬಂಧಿತರು. ಇಬ್ಬರೂ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿದ್ದರು. ಇವರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಅಶ್ಲೀಲ ಪದಗಳಿಂದ ನಿಂದನೆ ನೋಡಿ ಸಹಿಸದ ವಿಜಯಲಕ್ಷ್ಮೀ ಅವರು ದೂರು ದಾಖಲು ಮಾಡಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಇವರು, ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದರು. ಈ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ, ಐಪಿ ಅಡ್ರೆಸ್ ಮೂಲಕ ಇವರ ಮೂಲ ಪತ್ತೆ ಹಚ್ಚಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೆ ಇವರು ಯಾವ ನಟನ ಅಭಿಮಾನಿಗಳು ಎಂಬುದು ಇನ್ನೂ ತಿಳಿದಿಲ್ಲ.
ಕಳೆದ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ ಬಳಿಕ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ವಿರುದ್ಧ ಅವರು 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು 15 ಐಡಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ.




