ಬೆಂಗಳೂರು: ಸರ್ಕಾರಿ ಕೆಲಸ ಕೈಬಿಟ್ಟು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಸನ್ಯಾಸಿಯಾಗಲು ಹೊರಟಿದ್ದಾರೆ. ಬೆಂಗಳೂರು ಹೊರ ವಲಯದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠಾಧೀಶರಾದ ಚಂದ್ರಶೇಖರನಾಥ ಸ್ವಾಮೀಜಿ ಅವರು ಆರೋಗ್ಯ ಮತ್ತು ವಯಸ್ಸಿನ ಹಿನ್ನೆಲೆಯಲ್ಲಿ ಸೂಕ್ತ ಉತ್ತರಾಧಿಕಾರಿ ಹುಡುಕಾಟದಲ್ಲಿದ್ದಾರೆ. ಈಗ ಈ ಸ್ಥಾನಕ್ಕೆ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಎಲ್.ನಾಗರಾಜು ನೇಮಕಗೊಳ್ಳುವ ಸಾಧ್ಯತೆ ಇದೆ. ಇದಕ್ಕಾಗಿ ಅವರು ಸನ್ಯಾಸತ್ವ ಸ್ವೀಕರಿಸುತ್ತಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಒಕ್ಕಲಿಗ ಸಮಾಜದ ಸಂಘಟನೆ ಸೇರಿದಂತೆ ಹಲವಾರು ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಹೆಚ್.ಎಲ್.ನಾಗರಾಜು ಉನ್ನತ ಹುದ್ದೆ ಮತ್ತು ಸಾಂಸಾರಿಕ ಜೀವನವನ್ನು ತೊರೆದು ಸನ್ಯಾಸತ್ವವನ್ನು ಸ್ವೀಕರಿಸುತ್ತಿದ್ದಾರೆ. ಈ ಉದ್ದೇಶದಿಂದಾಗಿ ಅವರು ಶೀಘ್ರದಲ್ಲೇ ಕೆಲಸಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಲಿದ್ದಾರೆ. ಚಂದ್ರಶೇಖರನಾಥಶ್ರೀ ಶಿಷ್ಯರಾಗಿ ಮುಂದುವರೆಯಲಿದ್ದಾರೆ.
ಈ ಹಿಂದೆಯೂ ಹೆಚ್.ಎಲ್.ನಾಗರಾಜು ಸನ್ಯಾಸತ್ವ ಸ್ವೀಕರಿಸಿದ್ದರು. 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು. ‘ನಿಶ್ಚಲಾನಂದನಾಥ’ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ತಹಶೀಲ್ದಾರ್ ಹುದ್ದೆ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಆದರೆ ಹಿತೈಷಿಗಳು, ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಸನ್ಯಾಸತ್ವ ತ್ಯಜಿಸಿ ಅಧಿಕಾರಿಯಾಗಿ ಮುಂದುವರೆದಿದ್ದರು. ಇದೀಗ ಮತ್ತೆ ಕಾವಿ ಧರಿಸಲು ನಿರ್ಧರಿಸಿದ್ದು ಮತ್ತೊಮ್ಮೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ.




