ಬೆಂಗಳೂರು: ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಈ ಸಂಬಂಧ ಮಹಿಳೆಯನ್ನು ಅರೆಬೆತ್ತಲೆಯ ಸ್ಥಿತಿಯಲ್ಲಿ ಪೊಲೀಸ್ ವಾಹನದೊಳಗೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳು ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಬಗ್ಗೆ ವರದಿಯಾಗಿದೆ.
ವೈರಲ್ ವಿಡಿಯೋದಲ್ಲಿ ಕಾಣಿಸಿಕೊಳ್ಳುವ ಮಹಿಳೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅಲಿಯಾಸ್ ವಿಜಯಲಕ್ಷ್ಮಿ ಹಂಡಿ ಎಂದು ಗುರುತಿಸಲಾಗಿದ್ದು, ಈ ವಿಡಿಯೋವನ್ನು ಆಕೆಯ ಕುಟುಂಬದ ಸದಸ್ಯರೊಬ್ಬರು ಚಿತ್ರೀಕರಿಸಿ ಹೊರಗೆ ಹರಿಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ಇನ್ನು ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತೆ ವಿರುದ್ಧ ಕಾಂಗ್ರೆಸ್ ನಾಯಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಮಹಿಳೆಯನ್ನು ಅರಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸರನ್ನು ಸೇವೆಯಿಂದ ವಜಾ ಗೊಳಿಸಬೇಕು ಹಾಗೂ ಘಟನೆಯ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪರಮೇಶ್ವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದ್ದರೆ ಮಹಿಳೆಯ ಮೇಲೆ ಕಾನೂನು ಪ್ರಕಾರ ಶಿಕ್ಷೆಯಾಗಲಿ. ಆದರೆ ಕಾನೂನನ್ನು ರಕ್ಷಣೆ ಮಾಡಬೇಕಾದ ಪೊಲೀಸರೇ ವಿವಸ್ತ್ರಗೊಳಿಸಿ ರಾಕ್ಷಸರಂತೆ ವರ್ತಿಸಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು ಈ ಘಟನೆ ಹಿನ್ನೆಲೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ಮಧ್ಯಪ್ರವೇಶ ಮಾಡಬೇಕು. ಅವರು ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಿ. ಯಾರೇ ಭಾಗಿಯಾಗಿದ್ದರೂ ಅವರನ್ನು ಕಾನೂನು ಪ್ರಕಾರ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇಲೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವಿಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ಇವರು ರಾಜಕೀಯ ಅಧಿಕಾರವನ್ನು ಬಳಸಿಕೊಂಡಿದ್ದಾರೆ. ಮಾನವೀಯ ಜಗತ್ತು ತಲೆ ತಗ್ಗಿಸುವಂತೆ ನಡೆದುಕೊಂಡಿದ್ದಾರೆ. ಮಳಾ ಅಯೋಗ ಸುಮೋಟೋ ಕೇಸ್ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಸುಳ್ಳು ದೂರು ನೀಡಿರುವ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧವೂ ಕ್ರಮ ಆಗಬೇಕು. ಪೊಲೀಸರ ಕೃತ್ಯಕ್ಕೆ ಪ್ರಾಯಶ್ಚಿತ್ತ ಇಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಪೋರೇಟರ್ ಅಡಿಯಾಳಿನಂತೆ ಕೆಲಸ ಮಾಡಿದ್ದಾರೆ. ಈ ಕೂಡಲೇ ಪೊಲೀಸರು, ಕಾಂಗ್ರೆಸ್ ಕಾರ್ಪೋರೇಟರ್ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ನ ಬಿಜೆಪಿ ಸಚೇತಕ ರವಿಕುಮಾರ್‌ರವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಕುಮಕ್ಕಿನ ಕಾರಣದಿಂದ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ದೌರ್ಜನ್ಯ ಮಾಡಿದ್ದಾರೆ. ಮಳೆಯನ್ನು ವಸ್ತಗೊಳಿಸಿ ದೌರ್ಜನ್ಯ ಮಾಡಿರುವುದು ಸರ್ಕಾರಕ್ಕೆ ಗೌರವ ತರುವುದಿಲ್ಲ. ಇಲ್ಲಿ ಮಳೆಯರ ಶೀಲದ ಪ್ರಶ್ನೆ ಬಂದಿದೆ. ಯಾರು ಅಮಾನೕಯವಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಸುಳ್ಳು ಆರೋಪ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿಲ್ಲ; ತಾನಾಗಿಯೇ ಬಟ್ಟೆ ಬಿಚ್ಚಿಕೊಂಡು ಪೊಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬಂಧನದ ಸಂದರ್ಭದಲ್ಲಿ ಸುಜಾತಾ ಹಂಡಿ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಬಾಯಿಯಿಂದ ಕಚ್ಚಿರುವ ಘಟನೆ ಕೂಡ ನಡೆದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಆದರೂ ಮಹಿಳಾ ಪೊಲೀಸ್ ಸಿಬ್ಬಂದಿ ಸಂಯಮ ತೋರಿ ಆಕೆಗೆ ಬಟ್ಟೆ ತೊಡಿಸಿ ಕರ್ತವ್ಯ ನಿರ್ವಹಿಸಿ ಬಂಧಿಸಿ ಕರೆತಂದಿದ್ದಾರೆ ಎಂದರು.
ಈ ಪ್ರಕರಣದಲ್ಲಿ ಸುಜಾತಾ ಹಂಡಿ ವಿರುದ್ಧ ಗಂಭೀರ ಸ್ವರೂಪದ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ಈ ವರ್ಷದಲ್ಲೇ ಇತರ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಸುಜಾತಾ ಹಂಡಿ ವಿರುದ್ಧ ಗಂಭೀರ ಆರೋಪಗಳಿರುವ ಹಿನ್ನೆಲೆ ಹೆಚ್ಚಿನ ಪೊಲೀಸ್ ಹಾಗೂ ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಹೋಗಲಾಗಿತ್ತು. ವಶಕ್ಕೆ ಪಡೆದ ನಂತರ ಆಕೆಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ. ಪೊಲೀಸ್ ಸಿಬ್ಬಂದಿಯನ್ನು ಬಾಯಿಯಿಂದ ಕಚ್ಚಿ ಹಲ್ಲೆ ಕೂಡ ನಡೆಸಲಾಗಿದೆ. ಆದರೂ ನಮ್ಮ ಸಿಬ್ಬಂದಿಯೇ ಬೇರೆ ಬಟ್ಟೆ ತಂದು ಆಕೆಯ ಮಾನ ರಕ್ಷಿಸಿದ್ದಾರೆ. ಮಹಿಳೆಯನ್ನು ವಿವಸ್ತ್ರಗೊಳಿಸಿದ ಆರೋಪ ಸಂಪೂರ್ಣ ಸುಳ್ಳು. ಘಟನೆಯ ಕುರಿತು ಡಿಸಿಪಿ ಮಟ್ಟದ ತನಿಖೆಗೆ ಸೂಚನೆ ನೀಡಲಾಗಿದೆ. ಜೊತೆಗೆ ಪ್ರಕರಣದ ವಿಡಿಯೋವನ್ನು ವೈರಲ್ ಮಾಡಿದ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.



