ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡ ಉದ್ಘಾಟನೆ
ಬೆಳಗಾವಿ: ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರ ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅನುಕುವಾಗುವ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಸಾರ್ವಜನಿಕರಿಗೆ ತ್ವರಿತ ಸಾರಿಗೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಕ್ಕೆ ಆದಾಯ ತರುವ ಪ್ರಮುಖ ಇಲಾಖೆಗಳಲ್ಲಿ ಸಾರಿಗೆ ಇಲಾಖೆ ಕೂಡ ಒಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಈಗಾಗಲೇ ನೇಮಕ ಪ್ರಕ್ರಿಯೆ ನಡೆದಿದ್ದು, ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿ ಕೊರತೆ ಕಡಿಮೆಯಾಗಲಿದೆ ಎಂದರು.
ಬೈಲಹೊಂಗಲದಲ್ಲಿ 5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ “ಸ್ವಯಂ ಚಾಲಿತ ಚಾಲನಾ ಪಥ” ಉದ್ಘಾಟನೆ ಮಾಡಲಾಗಿದೆ. ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ಒದಗಿಸಲಾಗುವುದು. ಕರ್ಕಶ ಹಾರ್ನ್, ಹೆಚ್ಚು ಪ್ರಕಾಶದ ಲೈಟ್ ಗಳು ಇರುವ ವಾಹನಗಳನ್ನು ಗುರುತಿಸಿ ದಂಡಗಳನ್ನು ವಿಧಿಸಬೇಕು. ಸಾರಿಗೆ ಇಲಾಖೆಯ ಕಚೇರಿಯಲ್ಲಿ ಮಧ್ಯವರ್ತಿಗಳ ಪ್ರವೇಶಕ್ಕೆ ನಿರ್ಬಂಧ ಹೇರಬೇಕು ಎಂದರು.
ಜಿಲ್ಲೆಗೆ ಹೆಚ್ಚುವರಿ ಬಸ್ ಸೌಲಭ್ಯ: ಬೆಳಗಾವಿ ಜಿಲ್ಲೆಗೆ ಒಟ್ಟು 300 ಬಸ್ ಗಳನ್ನು ನೀಡಲಾಗುವುದು. ಅದರಲ್ಲಿ ನಗರ ಸುತ್ತಮುತ್ತ ಸಂಚಾರಕ್ಕೆ 100 ಎಲೆಕ್ಟ್ರಿಕ್ ಬಸ್ ಗಳನ್ನು ಸಹ ಒದಗಿಸಲಾಗುವುದು. ಅದೇ ರೀತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದಲ್ಲಿ ಸ್ಮಾರ್ಟ್ ಸಿಟಿಯೋಜನೆಯಡಿ ಸಿಟಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಾಗುವುದು ಎಂದರು.









