ಬೆಂಗಳೂರು: ಹೊರ ರಾಜ್ಯದಿಂದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ, ನಮ್ಮ ರಾಜ್ಯದ ಜಾನುವಾರುಗಳಿಗೆ ಯಾವುದೇ ಅಡ್ಡಿಯಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಸಂಭವಿಸಿದಾಗ ತಮಿಳುನಾಡಿನಿಂದ ಸಾವಿರಾರು ಜಾನುವಾರುಗಳನ್ನು ತಂದು ನಮ್ಮ ಅರಣ್ಯ ನಾಶಪಡಿಸುತ್ತಿರುವ ಅಂಶ ವರದಿಯಲ್ಲಿ ತಮ್ಮ ಗಮನಕ್ಕೆ ಬಂದ ಬಳಿಕ, ಹೊರ ರಾಜ್ಯದ ಜಾನುವಾರುಗನ್ನು ನಮ್ಮ ಕಾಡಿನಲ್ಲಿ ಮೇಯಿಸುವುದಕ್ಕೆ ನಿಷೇಧ ಹೇರಲಾಗಿದೆ. ನಮ್ಮ ರಾಜ್ಯದ ಕುರಿಗಾಹಿಗಳಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಡೀಮ್ಡ್ ಅರಣ್ಯದ ಬಗ್ಗೆ ಈಗಾಗಲೇ ಮರು ಸಮೀಕ್ಷೆ ನಡೆಯುತ್ತಿದೆ. ಸರ್ವೋನ್ನತ ನ್ಯಾಯಾಲಯ ಮತ್ತೊಂದು ಅವಕಾಶ ನೀಡಿದ್ದು, ಸಮೀಕ್ಷೆಯಲ್ಲಿ ಅರಣ್ಯದಂತೆ ಇಲ್ಲದ ಯಾವ ಪ್ರದೇಶ ಕೈಬಿಡಬಹುದು ಯಾವುದನ್ನು ಸೇರಿಸಬಹುದು ಎಂಬುದನ್ನು ಪರಾಮರ್ಶಿಸಲಾಗುವುದು ಎಂದರು.
ಅರಣ್ಯೇತರ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲು ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಪರ್ಯಾಯ ಭೂಮಿ ಮತ್ತು ಎನ್.ಪಿ.ವಿ. ಶುಲ್ಕ ಪಾವತಿಸಿ ನಿಯಮಾನುಸಾರ ಅನುಮತಿ ಪಡೆಯಲು ಅವಕಾಶವಿದೆ ಎಂದರು.




