ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾದ ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಜನಿವಾರವನ್ನು ಪರೀಕ್ಷೆಗೆ ಮುನ್ನ ತೆಗೆಸಿದ ಕ್ರಮ ವಿವಾದಕ್ಕೆ ಕಾರಣವಾಗಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಜನಿವಾರ ತೆಗೆಯುವಂತೆ ಪರೀಕ್ಷೆಯ ಮೇಲ್ವಿಚಾರಕರು ಸೂಚಿಸಿದ್ದರು. ಪರೀಕ್ಷೆಗೆ ಸಿಇಟಿ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿ ಅನುಸಾರ ತಾವು ಕ್ರಮ ಕೈಗೊಂಡಿರುವಾಗಿ ಅಧಿಕಾರಿಗಳು ತಿಳಿಸಿದ್ದರು.
ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಜನಿವಾರ ತೆಗೆಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ. ಇದರ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಪ್ರಕರಣದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜನಿವಾರ ತೆಗೆಸಿದ ಪ್ರಕರಣ ಕುರಿತಂತೆ ಉನ್ನತ ಅಧಿಕಾರಿಗಳಿಂದ ವರದಿ ಪಡೆದು ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಮತ್ತೊಂದೆಡೆ, ಶಿವಮೊಗ್ಗದಲ್ಲಿ ಜನಿವಾರ ತೆಗೆಸಿದ ಅಧಿಕಾರಿಯ ಅಮಾನತಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.
ವಿದ್ಯಾರ್ಥಿಯ ಜನಿವಾರ ತೆಗೆಯುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ ಈ ರೀತಿ ಮಾಡಿರುವುದು ಸರಿಯಲ್ಲ. ಈ ವಿಚಾರ ತಮ್ಮ ವ್ಯಾಪ್ತಿಗೆ ಬರದಿದ್ದರೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿರುವುದರಿಂದ ಅಧಿಕಾರಿಯ ಅಮಾನತ್ತಿಗೆ ಸೂಚನೆ ನೀಡಿದ್ದೇನೆ ಎಂದರು.
ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪರೀಕ್ಷೆ ಬರೆದ ವಿದ್ಯಾರ್ಥಿ ಜನಿವಾರ ತೆಗೆಸಿರುವುದು ಅತಿರೇಕ. ಈ ರೀತಿ ಯಾವುದೇ ಮಾರ್ಗಸೂಚಿಯನ್ನು ಸಿಇಟಿ ಹೊರಡಿಸಿಲ್ಲ. ಇದೊಂದು ವಿಕೃತಿ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಬಂದ ನಂತರ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದರು.
ವಿದ್ಯಾರ್ಥಿಯ ಜನಿವಾರ ತೆಗಸಿದ್ದರಿಂದ ವಿದ್ಯಾರ್ಥಿಯೊಬ್ಬರು ಪರೀಕ್ಷೆ ಬರೆದಿಲ್ಲ ಎಂಬ ವರದಿಗಳನ್ನು ಗಮನಿಸಿದ್ದೇನೆ. ಈ ವಿದ್ಯಾರ್ಥಿಯ ಭವಿಷ್ಯಕ್ಕೆ ತೊಂದರೆಯಾಗಬಾರದು ಮುಂದೆ ಪರ್ಯಾಯವಾಗಿ ಏನು ಮಾಡಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದರು.
ಎಲ್ಲ ಜಾತಿ ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ಈ ರೀತಿಯ ಘಟನೆಗಳಿಗೆ ಸರ್ಕಾರ ಪ್ರೋತ್ಸಾಹ ಕೊಡುವುದಿಲ್ಲ. ಇದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಹಾಗೆಯೇ ಪರೀಕ್ಷೆ ಬರೆಯದಿರುವ ವಿದ್ಯಾರ್ಥಿಯ ಬಗ್ಗೆಯೂ ಏನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ಮಾಡುತ್ತೇನೆ. ವರದಿ ಬಂದ ನಂತರ ಎಲ್ಲ ನಿರ್ಧಾರಗಳು ಆಗಲಿವೆ ಎಂದರು.
ಈ ಘಟನೆ ಬಗ್ಗೆ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದಾರೆ. ತಕ್ಷಣವೇ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಸಮುದಾಯವನ್ನು ನೋಯಿಸುವ ಉದ್ದೇಶ ನಮ್ಮದಲ್ಲ. ಪರೀಕ್ಷೆ ನಡೆಸುವ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದು. ಸಿಇಟಿ ಮಾರ್ಗಸೂಚಿಯಲ್ಲಿ ಜನಿವಾರ ತೆಗೆಯಬೇಕೆಂದೇನಿಲ್ಲ. ಇದೆಲ್ಲ ವಿಕೃತಿ ಇದನ್ನು ನಾನೂ ಖಂಡಿಸುತ್ತೇನೆ ಎಂದರು.
ಘಟನೆಯನ್ನು ಖಂಡಿಸಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಪರೀಕ್ಷಾಧಿಕಾರಿಗಳನ್ನು ಅಮಾನತು ಮಾಡಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್ ರಘುನಾಥ್, ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಪರೀಕ್ಷಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.




