ಬೆಂಗಳೂರು: ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು, ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹಾಗೂ ಆಯಾ ಗ್ರಾಮ ಪಂಚಾಯತಿಯ ಆದ್ಯ ಜವಾಬ್ದಾರಿಯಾಗಿದೆ ಎಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದೆ ಎಂದಿದ್ದಾರೆ.
ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರೆ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಚಗೊಳಿಸುವುದು, ಹಾಗೂ ಕ್ಲೋರಿನೇಷನ್ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗರೂಕತಾ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಬೇಕು. ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪದೇ ಪದೇ ಪುನಾರಾವರ್ತನೆ ಆದಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.




