ಮೈಸೂರು: ಬೃಹತ್ ರೋಡ್ ಶೋ ಮೂಲಕ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸದ ವಿಜಯೇಂದ್ರ ಯಡಿಯೂರಪ್ಪ ಮತ್ತೊಮ್ಮೆ ಮೋದಿ ಜಯಘೋಷ ಮೂಡಿಸುತ್ತಿದೆ ವಿಜಯದ ವಿಶ್ವಾಸ ಎಂದು ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ

ನಾಡಿಗೆ ಅಗ್ರಮಾನ್ಯ ಕೊಡುಗೆ ನೀಡಿರುವ ಶ್ರೇಷ್ಠ ಮನೆತನದ ಮಾನ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಿ ಮತ್ತೊಮ್ಮೆ ಮೋದಿ ಮಹಾ ಸಂಕಲ್ಪ ಸಾಕಾರಕ್ಕಾಗಿ ಸಹಸ್ರಾರು ಸಂಖ್ಯೆಯಲ್ಲಿ ಸಂಘಟನೆಗೊಂಡಿದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಉತ್ಸಾಹ ಐತಿಹಾಸಿಕ ಗೆಲುವಿನ ಮುನ್ಸೂಚನೆ ನೀಡಿತು ಎಂದರು.


ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೆಗೌಡ, ಪ್ರಮೋದಾದೇವಿ ಒಡೆಯರ್, ಸಂಸದರಾದ ವಿಜಯ್ ಶಂಕರ್, ಶಾಸಕರಾದ ಟಿ.ಎಂ.ಶ್ರೀವತ್ಸ, ಜಿ.ಟಿ ಹರೀಶ್ ಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ.ರಾಜೇಂದ್ರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.




