ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ನವೀಕರಣ ಮತ್ತು ಹೊನಲು-ಬೆಳಕಿನ ದೀಪದ ವ್ಯವಸ್ಥೆ ಕಾಮಗಾರಿ, ಡಾಂಬರೀಕರಣ ಕಾಮಗಾರಿ ಹಾಗೂ ಬೋರ್ ವೆಲ್ ಕೊರೆಸುವ ಕಾಮಗಾರಿ, ನಾಮಫಲಕ ಆಳವಡಿಕೆ ಕಾಮಗಾರಿಗಳ ಗುದ್ದಲಿಪೂಜೆಯನ್ನು ಮಾಜಿ ಶಿಕ್ಷಣ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ನೇರವೇರಿಸಿದರು.
ಬಿಬಿಎಂಪಿ ಮಾಜಿ ಸದಸ್ಯ ಎಂ.ಮುನಿರಾಜು, ಮತ್ತು ಮಂಡಲ ಅಧ್ಯಕ್ಷ ಸುದರ್ಶನ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಂಜಯ್ ಕುಮಾರ್ ಉಪಸ್ಥಿತರಿದ್ದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ಮಾತನಾಡಿ, ಸಾರ್ವಜನಿಕರ ಆಶಯದಂತೆ ಕಾಮಗಾರಿಗಳ ಅನುಷ್ಠಾನ, ತೆರಿಗೆ ಹಣ ಸಮರ್ಪಕ ಬಳಕೆ ಉದ್ದೇಶದಿಂದ ಕಾಮಗಾರಿಗಳ ಅನುಷ್ಠಾನ ಮಾಡಲಾಗುತ್ತಿದೆ. ಕಳೆದ 35 ವಾರಗಳಿಂದ ಜನರೊಂದಿಗೆ ಜನಸೇವಕ ಕಾರ್ಯಕ್ರಮದಿಂದ ಸಾರ್ವಜನಿಕರ ಸಾವಿರಾರು ಸಮಸ್ಯೆಗಳ ಪರಿಹಾರ ಸಿಕ್ಕಿದೆ. ಇದೀಗ ದಿನಕ್ಕೊಂದು ವಾರ್ಡ್ ಅಭಿಯಾನ ಆರಂಭಿಸಲಾಗಿದೆ. ಪ್ರತಿ ದಿನ ಒಂದೊಂದು ವಾರ್ಡ್ ಗಳಿಗೆ ಭೇಟಿ ಮಾಡಿ ಸಾರ್ವಜನಿಕ ಸಮಸ್ಯೆಗಳ ಸಮಸ್ಯೆಗಳನ್ನು ಅಲಿಸಲಾಗುತ್ತಿದೆ ಎಂದರು.
ದಯಾನಂದನಗರ ವಾರ್ಡ್ ಬಿಜೆಪಿ ಪ್ರಮುಖ ಮುಖಂಡರು, ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದರು.








