ಬಳ್ಳಾರಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವದೆಹಲಿ ಅವರ ಮಾರ್ಗಸೂಚಿಯಂತೆ ಎನ್ಎಂಎಎಸ್ ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ಕ್ಯುಎಎಸಿ ವತಿಯಿಂದ ನಡೆಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಎನ್ಎಂಎಎಸ್ ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಯ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಪರೀಕ್ಷೆಯ ಆನ್ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in/ ವೆಬ್ಸೈಟ್ನಲ್ಲಿ ಲಭ್ಯವಿದೆ.
ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್ಲೈನ್ನಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಲಭ್ಯವಿರುವ ಎನ್ಎಂಎಎಸ್ ಲಾಗಿನ್ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್ಸೈಟ್ನಲ್ಲಿನ ಸುತ್ತೋಲೆ ನೋಡಬಹುದು ಹಾಗೂ ಕೆಎಸ್ಕ್ಯುಎಎಸಿ ಕಚೇರಿಯ ದೂ.080-23341615 ಗೆ ಸಂಪರ್ಕಿಸಬಹುದು.




