ಶಿವಮೊಗ್ಗ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ದಿಂದ 35 ವರ್ಷ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತರು ವೆಬ್ಸೈಟ್ https://dbcdc.karnataka.gov.in/info-2/State+Government+Programs/Arivu+Education+Loan+scheme/kn ರಲ್ಲಿ ದಿ: 15/12/2024 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448451111 ನ್ನು ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.




