ಮೈಸೂರು: ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ.ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರದಿಂದ ಅನುಷ್ಠಾನ ಮಾಡುವ ವಿವಿಧ ಯೋಜನೆಗಳ ಬಗ್ಗೆ 2021ರ ಸೆಪ್ಟೆಂಬರ್ 19 ರಂದು ಪ.ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೊಂದಿಗೆ ಆನ್‍ಲೈನ್ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಂವಾದ ಮೂಲಕ ವಿದ್ಯಾರ್ಥಿಗಳ ಸಲಹೆ, ಅಭಿಪ್ರಾಯ ಮತ್ತು ಸಮಸ್ಯೆಗಳನ್ನು ಪಡೆಯಲು ತೀರ್ಮಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂವಾದದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಆನ್‍ಲೈನ್ ಲಿಂಕ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದ್ದು, http://164.100.133.163/samvada/esamvadaRegistration.aspx ಲಿಂಕ್ ಅನ್ನು ಪ್ರವೇಶಿಸಬಹುದು.
ಪ.ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ 18-32 ವರ್ಷಗಳ ವಯೋಮಾನದ ಹಾಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು 2021ರ ಸೆಪ್ಟೆಂಬರ್ 9 ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬಹುದು.




