ಬೆಂಗಳೂರು: ಎಲ್ಲಾ ಅರ್ಹರಿಗೆ ಸಮರ್ಪಕವಾಗಿ ಆಹಾರ ಧಾನ್ಯ ವಿತರಿಸುವ ದೃಷ್ಟಿಯಿಂದ ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದುಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ? ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಕೇಂದ್ರ ಸಚಿವ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದು ಕಿಡಿಕಾರಿದರು.
ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದು ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರಿಗೆ ಸವಾಲೆಸೆದರು.
ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.
ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2340 ಕೋಟಿ ನೀಡಿದ್ದಾರೆ. ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58%ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರಸ್ವಾಮಿ, ಪ್ರಹ್ಲಾದ ಜೋಷಿಯವರು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದರು.
ರೈತರಿಗೆ ಅನ್ಯಾಯ ಮಾಡಬೇಡಿ ಇದು ದ್ರೋಹದ ಕೆಲಸ ಎಂದು ಪ್ರಧಾನಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು.
ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿರಹಿತ ಸಾಲ, 15 ಲಕ್ಷದವರೆಗೆ ಶೇಕಡಾ 3ರ ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಯೋಜನೆಯಡಿ 11595 ಕೋಟಿ ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು? ಇದನ್ನು ನೀವು ಕೇಳುವುದಿಲ್ಲ ಎಂದರು.
56000 ಕೋಟಿ ರೂಪಾಯಿಗಳ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಏಕೆ ಕೊಡುತ್ತಿಲ್ಲ ಎಂದು ಕೇಳಿದರು.
ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಲು ಮತಗಳಿಸಲು ಮಹಾರಾಷ್ಟ್ರ ಸರ್ಕಾರ ನೀಡಿರುವ ಸುಳ್ಳು ಜಾಹೀರಾತು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದರು.



