ಬೆಂಗಳೂರು: ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಕೆಲಸ ಮಾಡುವವರು ಬೇಕು. ಅವರಿಗೆ ಜವಾಬ್ದಾರಿ ಕೊಟ್ಟರೆ ತಕ್ಕ ಫಲಿತಾಂಶ ಬರಬೇಕು. ನಮ್ಮ ಸುತ್ತ ಗಿರಿಗಿಟ್ಲೆಯಂತೆ ಸುತ್ತುತ್ತಿದ್ದರೆ ಆಗುವುದಿಲ್ಲ. ತಾಲೂಕಿನಲ್ಲಿ ಕೂತು, ಅಲ್ಲಿರುವ ಸಮಸ್ಯೆ ಬಗೆಹರಿಸಬೇಕು. ಫಲಿತಾಂಶ ಬರುವ ನಾಯಕತ್ವಕ್ಕೆ ಮಾತ್ರ ಆದ್ಯತೆ ನೀಡಲಾಗುವುದು ಎಂದರು.
ಪದಾಧಿಕಾರಿಗಳ ಪಟ್ಟಿ ಸಿದ್ಧವಾಗಿದ್ದು, ಯಾರಿಗೆ ಆಸಕ್ತಿ ಇಲ್ಲ ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುವುದು. ಪಕ್ಷ ಸಂಘಟನೆ ವಿಚಾರದಲ್ಲಿ ನಮಗೆ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರು ಬೇಕು. ಬೇರೆಯವರ ಒತ್ತಡದ ಮೇರೆಗೆ ನೇಮಕ ಮಾಡಿಕೊಂಡು ಸಮಯ ವ್ಯರ್ಥ ಮಾಡುವುದರಲ್ಲಿ ಪ್ರಯೋಜನವಿಲ್ಲ ಎಂದರು.
ಕೆಲಸ ಮಾಡುವವರಿಗೆ ಅವಕಾಶ ನೀಡಿ ಎಂದು ಎಐಸಿಸಿ ಆದೇಶ ನೀಡಿದೆ. ಈ ವಿಚಾರವಾಗಿ ನಾವು ವರದಿ ತರಿಸಿಕೊಂಡಿದ್ದು, ಸರಿಯಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು. ಮೀಸಲಾತಿ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿ ಅವರನ್ನು ತಯಾರಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಮಂತ್ರಿಗಳ ಅಭಿಪ್ರಾಯ ಪಡೆಯುತ್ತಿದ್ದು, ಈ ವಾರವೇ ಈ ಪಟ್ಟಿ ಅಂತಿಮಗೊಳಿಸಲಾಗುವುದು ಎಂದರು.




