ಮೈಸೂರು: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 16 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ. ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಪ್ರತಿವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸನ್ನು ನಡೆಸುವ ಈ ಸಂಸ್ಥೆ ಪ್ರಸ್ತುತ 2025-26ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 2025-26ನೇ ಸಾಲಿನ ಈ ರಂಗತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೋರ್ಸಿನ ಒಂದು ವರ್ಷದ ವ್ಯಾಸಂಗ ಅವಧಿಯಲ್ಲಿ ಊಟ, ವಸತಿ ಹಾಗೂ ಪಠ್ಯ ಸಾಮಗ್ರಿಗಳ ವೆಚ್ಚಗಳನ್ನು ನಿಯಮಾನುಸಾರ ವಿದ್ಯಾರ್ಥಿ ವೇತನದಲ್ಲಿ ಭರಿಸಲಾಗುವುದು.
ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ರಂಗಾಯಣದ ವೆಬ್‌ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.300/-, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.200/-ಗಳು (ರಂಗಕೈಪಿಡಿ/ಪರಿಚಯ ಪುಸ್ತಕ ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು (Deputy Director, Rangayana, Mysore) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ದಿನಾಂಕ:30-06-2025 ರ ಸಂಜೆ 5.30ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.
ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುವುದು. ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ: 0821-2512639, ಮೊ:9449630465ನ್ನು ಸಂಪರ್ಕಿಸಬಹುದು.




