ಬೆಂಗಳೂರು: ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ನಾಳೆ ಕೂಡ ಮಳೆ ಸಾಧ್ಯತೆ ಇದೆ, ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದರು.
ವಿಪಕ್ಷಗಳ ನಾಯಕರ ಹೇಳಿಕೆಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ ಎಂದರು.




