ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಅಪರೂಪದ ವಿದ್ಯಮಾನ ನಡೆಯಿತು. ಆಡಳಿತ ಪಕ್ಷದ ಸದಸ್ಯರೇ ವಿರೋಧ ವ್ಯಕ್ತಪಡಿಸಿದ ಪರಿಣಾಮ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ವಿಧಾನಸಭೆಯ ಆಯ್ಕೆ ಸಮಿತಿಗೆ ವಹಿಸುವ ನಿರ್ಣಯ ಕೈಗೊಳ್ಳಲಾಯಿತು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸುವ ಬದಲಾಗಿ ಆಯ್ಕೆ ಸಮಿತಿಗೆ ವಹಿಸಲಾಯಿತು.
ಕಂದಾಯ ಸಚಿವರ ಪರವಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025 ಅನ್ನು ಮಂಡಿಸಿ ಅನುಮೋದನೆ ನೀಡಲು ಮನವಿ ಮಾಡಿದರು.
ಕೊಡಗು ಭಾಗದಲ್ಲಿನ ಜಮ್ಮಾ, ಬಾಣೆ ಹಿಡುವಳಿ ವ್ಯವಸ್ಥೆಗಳಿಗೆ ಸಂಬಂಧಪಟ್ಟಂತ ವಿಧೇಯಕ ಇದಾಗಿದ್ದು, ಅಂಗೀಕಾರ ನೀಡಬೇಕು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ, ಕೊಡಗಿನಲ್ಲಿ ಹಲವಾರು ವರ್ಷಗಳಿಂದ ಸಮಸ್ಯೆಗೆ ಕಾರಣವಾಗಿರುವ ಭೂ ದಾಖಲಾತಿಗಳ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ಕಾಯ್ದೆ ರೂಪಿಸಬೇಕಿತ್ತು. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಈ ಮಸೂದೆ ಇದೆ. ಜಮೀನು ಸ್ವಾಧೀನದಲ್ಲಿ ಇರುವವರು ಬೇರೆ, ದಾಖಲಾತಿಗಳಲ್ಲಿ ನಮೂದಾಗಿರುವ ಹೆಸರುಗಳು ಬೇರೆ ಬೇರೆ ಎಂಬ ವ್ಯವಸ್ಥೆ ಇದೆ. ಅದನ್ನು ಸರಿಪಡಿಸಲು ಈ ಕಾಯ್ದೆ ಸಮರ್ಥವಾಗಿಲ್ಲ ಎಂದರು.
ಶಾಸಕ ಮಂಥರ ಗೌಡ ಕೂಡ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ, ದಾಖಲಾತಿಗಳ ತಿದ್ದುಪಡಿಯಾಗಬೇಕು ಎಂದು ಮನವಿ ಮಾಡಿದರು. ಈ ವಿಧೇಯಕವನ್ನು ಆಯ್ಕೆ ಸಮಿತಿಗೆ ಒಪ್ಪಿಸುವಂತೆ ಒತ್ತಾಯಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇದಕ್ಕೆ ಧ್ವನಿಗೂಡಿಸಿದರು. ಒತ್ತಾಯಕ್ಕೆ ಮಣಿದ ಸಚಿವ ಎಚ್.ಕೆ. ಪಾಟೀಲ್ ವಿಧೇಯಕವನ್ನು ಆಯ್ಕೆ ಸಮಿತಿಗೆ ವಹಿಸುವುದಾಗಿ ತಿಳಿಸಿದರು.
ಸದನದ ಅಭಿಪ್ರಾಯದಂತೆ ವಿಧಾನ ಸಭೆಯ ಆಯ್ಕೆ ಸಮಿತಿ ರಚಿಸುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಕಟಿಸಿದರು.




