ಮಂಗಳೂರು: ಬೀದಿಬದಿ ವ್ಯಾಪಾರಿಗಳ ಹಕ್ಕು ರಕ್ಷಣೆಗಾಗಿ ದೇಶದಲ್ಲಿ ಕಾನೂನುಗಳಿದ್ದರೂ ಅವರ ಮೇಲಿನ ಪ್ರಭುತ್ವದ ದೌರ್ಜನ್ಯ ದಬ್ಬಾಳಿಕೆಗಳು ಮಿತಿ ಮೀರುತ್ತಿದೆ. ಬೀದಿ ವ್ಯಾಪಾರಿಗಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹಾಗೂ ಸಾಮಾಜಿಕ ಭದ್ರತೆ ಗಾಗಿ ಸಂಘಟಿತ ಹೋರಾಟಕ್ಕಿಳಿಯುವುದು ಅನಿವಾರ್ಯ ಎಂದು CITU ಸಂಯೋಜಿತ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಜ್ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕೋಟೆಕಾರ್ ಬೀರಿ ಜಂಕ್ಷನ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು ) ತಲಪಾಡಿ ವಲಯ ಸಮಿತಿ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಮಾವೇಶ ಮತ್ತು ಸದಸ್ಯರ ಗುರುತಿನ ಚೀಟಿ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಉಳ್ಳಾಲ ತಾಲೂಕು ವ್ಯಾಪ್ತಿಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳು ಬೀದಿ ವ್ಯಾಪಾರಿಗಳ ಸಮಗ್ರ ಸಮೀಕ್ಷೆ ನಡೆಸಿ ಅವರಿಗೆ ಐಡಿ ಕಾರ್ಡ್, ಮತ್ತು ಪ್ರಮಾಣ ಪತ್ರ ನೀಡಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ಮಾನವೀಯತೆಯಿಂದ ಬೀದಿ ವ್ಯಾಪಾರಿಗಳ ಜೊತೆ ವ್ಯವಹರಿಸಬೇಕೆಂದು ಆಗ್ರಹಿಸಿದರು
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಬೀದಿಬದಿ ವ್ಯಾಪಾರಸ್ಥರ ಬಗ್ಗೆ ಉದ್ದುದ್ದ ಮಾತನಾಡುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದಾಳಿಗಳನ್ನು ನಡೆಸಲು ಕುಮ್ಮಕ್ಕು ನೀಡುತ್ತಿದೆ. ಬೀದಿಬದಿ ವ್ಯಾಪಾರಸ್ಥರ ಬದುಕಿನ ರಕ್ಷಣೆಗಾಗಿ ದೇಶದಲ್ಲಿ ಕಾನೂನು ಇದ್ದರೂ ಅದನ್ನು ಜಾರಿಗೊಳಿಸಲು ಉಭಯ ಸರಕಾರಗಳು ಮುತುವರ್ಜಿ ನೀಡುತ್ತಿಲ್ಲ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ ಬೀದಿಬದಿ ವ್ಯಾಪಾರಸ್ಥರ ಸಂಘದ ತಲಪಾಡಿ ವಲಯದ ಕಾರ್ಯಾದ್ಯಕ್ಷ ಯಶು ಕುಮಾರ್ ಪಕ್ಕಳ ಮಾತನಾಡಿ, ಬೀದಿಬದಿ ವ್ಯಾಪಾರಸ್ಥರ ಬದುಕಿನ ಬವಣೆಗಳ ಬಗ್ಗೆ ಬೆಳಕನ್ನು ಚೆಲ್ಲುತ್ತಾ, ಸಂಘಟನೆ ಹಾಗೂ ಹೋರಾಟಗಳಿಂದ ಮಾತ್ರವೇ ಭವಿಷ್ಯದ ಬದುಕು ರೂಪುಗೊಳ್ಳುತ್ತದೆ ಎಂದರು.
ವೇದಿಕೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮುಝಾಫರ್ ಅಹಮದ್, ಸಂಘದ ತಲಪಾಡಿ ವಲಯ ಕಾರ್ಯದರ್ಶಿ ವಿನಾಯಕ ಶೆಣೈ, ಇತರ ಮುಖಂಡರಾದ ಕಲಂದರ್ ಸಲೀಂ, ವಿಜಯ, ಸದಾಶಿವ ಮುಂತಾದವರು ಉಪಸ್ಥಿತರಿದ್ದರು. ಸಮಾವೇಶದಲ್ಲಿ ಭಾಗವಹಿಸಿದ್ದ ಸಂಘದ ಸದಸ್ಯರಿಗೆ ಗುರುತುಚೀಟಿಯನ್ನು ಕೂಡ ಇದೇ ಸಂದರ್ಭದಲ್ಲಿ ವಿತರಿಸಲಾಯಿತು.




