ಹುಬ್ಬಳ್ಳಿ: ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಬಲವಿರುವ ನಮ್ಮ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.
ಬಿ.ವೈ.ವಿಜಯೇಂದ್ರ ಹೇಳಿದ್ದಾರೆ ಎಂದು ರಾಜೀನಾಮೆ ನೀಡಲು ಸಾಧ್ಯವೇ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಶಾಸಕರು, ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜ್ ಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಸಿಗಬೇಕಿದೆ ಎಂದರು.
ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ಧವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ನಿನ್ನೆ 16ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು ಎಂದು ಹೇಳಿದರು.
ಆಯೋಗ ಶಿಫಾರಸ್ಸು ಮಾಡಿದ್ದ 11,495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು, 1.66 ರಷ್ಟು ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರು 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ ಎಂದರು.
16ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.




