ಬೆಂಗಳೂರು: ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಉಪ ಚುನಾವಣೆಯ ಫಲಿತಾಂಶದ ಮೂಲಕ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯುವುದಿಲ್ಲ. ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ ಎಂದರು.
ವಿರೋಧ ಪಕ್ಷಗಳ ನಾಯಕರು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೇಲೆ ದೊಡ್ಡ ಚರ್ಚೆ ಮಾಡುತ್ತಿದ್ದರು, ಅಭಿವೃದ್ಧಿಗೆ ಹಣವಿಲ್ಲ ಎಂದರು. ಈ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, 224 ಕ್ಷೇತ್ರಗಳಿಗೆ ಈ ಹಣ ಹಂಚಿದರೆ ಪ್ರತಿ ಕ್ಷೇತ್ರಕ್ಕೆ ಸರಾಸರಿ 250 ಕೋಟಿ ಪ್ರತಿ ವರ್ಷ ನೀಡಲಾಗುತ್ತಿದೆ. ಇದು ಅಭಿವೃದ್ಧಿ, ಜನರ ಬದುಕಿಗಾಗಿ ನೀಡುತ್ತಿರುವ ಹಣವಲ್ಲವೇ? ಬಡ ಮತ್ತು ಮಧ್ಯಮದ ವರ್ಗದ ಜನರಿಗೆ ಆರ್ಥಿಕ ಶಕ್ತಿ ಸಿಕ್ಕಿಲ್ಲವೇ? ಈ ಯೋಜನೆ ಜಾರಿಯಲ್ಲಿ ಯಾವುದಾದರೂ ಅಕ್ರಮ ನಡೆದಿದೆಯೇ? ಇದೆಲ್ಲವನ್ನು ಅರಿತು ಜನರೇ ತೀರ್ಪು ನೀಡಿದ್ದಾರೆ ಎಂದರು.




