ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ.
ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು. ಈ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ.
– ಸಿದ್ದರಾಮಯ್ಯ, ಸಿಎಂ




