ಬೆಂಗಳೂರು: ಮಹಿಳೆಯರನ್ನು ಅತ್ಯಂತ ಗೌರವದಿಂದ ಕಾಣುವ ಸಂಸ್ಕೃತಿ ನಮ್ಮದು. ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸುವ ವಿಚಾರವಾಗಿ ಎಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಹಾಸನದ ಪೆನ್ ಡ್ರೈವ್ ಪ್ರಕರಣದ ತನಿಖೆಗಾಗಿ ನೇಮಕವಾಗಿರುವ SIT ವರದಿ ಶೀಘ್ರದಲ್ಲಿ ಹೊರಬಂದು ತಪ್ಪಿಸತ್ಥರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಮತ್ತು ಅದರ ನಾಯಕರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ವಾಗ್ದಾಳಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅಶ್ವತ್ಥ ನಾರಾಯಣ, ಸ್ತ್ರೀಯರ ಮೇಲಿನ ದೌರ್ಜನ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ನ ಅವಕಾಶವಾದಿ ರಾಜಕಾರಣಿಗಳು ಇಂತಹ ಪ್ರಕರಣವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಹುದು. ಆದರೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಹಾಗೂ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಸಿಗಬೇಕು ಎನ್ನುವ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ನಿಲುವು ಸ್ಪಷ್ಟವಾಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಸ್ತ್ರೀ ಸಮುದಾಯದ ರಕ್ಷಣೆಗೆ ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ದೌರ್ಜನ್ಯವೆಸಗಿದಾಗ ಸೌಜನ್ಯಕ್ಕೂ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ ಅವರ ಕುಟುಂಬವನ್ನು ನಡೆಸಿಕೊಂಡ ರೀತಿಯನ್ನು ನಾಡಿನ ಜನತೆಯೇ ನೋಡಿದ್ದಾರೆ ಎಂದಿದ್ದಾರೆ.
ಹಾಸನದ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು, ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಸಿಗಬೇಕು ಹಾಗೂ ಪ್ರಜ್ವಲ್ ರೇವಣ್ಣ ಸಹಿತ ಯಾರೇ ತಪ್ಪಿತಸ್ಥರಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು. DK Shivakumar ಅವರೇ, ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಈ ವಿಚಾರವಾಗಿ ಬಿಜೆಪಿಯವರನ್ನು ಕೇಳುತ್ತಾ ಕಾಲ ಹರಣ ಮಾಡುವ ಬದಲು ಸೂಕ್ತ ತನಿಖೆ ನಡೆಸಿ, ಶೀಘ್ರದಲ್ಲಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಕೊಡಿಸಿ. ತಮ್ಮ ರಾಜಕೀಯ ಲಾಭಕ್ಕಾಗಿ ಸಂತ್ರಸ್ತ ಮಹಿಳೆಯರ ಮಾನ ಹರಣ ಮಾಡುವ ರೀತಿಯ ವೀಡಿಯೊಗಳನ್ನು ನಿಮ್ಮದೇ ಕಾಂಗ್ರೆಸ್ ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟ ಯಾವುದೇ ವೀಡಿಯೊಗಳನ್ನು ಹಂಚಿಕೊಳ್ಳುವುದನ್ನು ಕೂಡಲೇ ತಡೆಹಿಡಿಯಬೇಕು ಮತ್ತು ಆ ಮಹಿಳೆಯರ ರಕ್ಷಣೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.




