ಬೆಂಗಳೂರು: ನೌಕರರ ಸುಮಾರು 75ಕ್ಕೂ ಹೆಚ್ಚು ಬೇಡಿಕೆಗಳಲ್ಲಿ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯತೆ ಇರುವ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸುವುದಾಗಿ ತಿಳಿಸಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮುಷ್ಕರ ನಿರತ ನೌಕರರ 300 ಪ್ರತಿನಿಧಿಗಳೊಂದಿಗೆ ಇಂದು ಸತತ ಮೂರು ಗಂಟೆಗಳ ಕಾಲ ಬೇಡಿಕೆಗಳು, ಸವಾಲುಗಳು ಹಾಗೂ ಸಾಧ್ಯತೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬಡ್ತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಕಾಲಮಿತಿಯೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಇಲಾಖೆಯ ನೌಕರರ ಹಿತ ಕಾಪಾಡುವುದರಲ್ಲಿ ಬದ್ಧತೆಯಲ್ಲಿ ಕೆಲಸ ಮಾಡುತ್ತೇನೆ, ಜನಸಾಮಾನ್ಯರಿಗೆ ಸರ್ಕಾರಿ ಸೇವೆ ನೀಡುವಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿರಬೇಕು ಎಂದರು.
ಮುಷ್ಕರ ಅಂತ್ಯಗೊಳಿಸಿ ಸೇವೆಗೆ ಮರಳಿದ RDPR ಕುಟುಂಬದ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು.




