ಬೆಂಗಳೂರು: ಇಂಜಿನಿಯರಿಂಗ್ ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ಪದವಿ ಹುದ್ದೆಗಳ ಪ್ರವೇಶಕ್ಕೆ ಪರೀಕ್ಷಾ ಪ್ರಾಧಿಕಾರ ನಡೆಸಲಾದ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳು ಹೆಚ್ಚಾಗಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ 46 ಪ್ರಶ್ನೆಗಳು ಪಠ್ಯಪುಸ್ತಕವನ್ನು ಹೊರತಾಗಿ ಕೇಳಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ದೊಡ್ಡ ಆತಂಕ ಉಂಟಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಅನುದಾನ ರಹಿತ ಶಾಲೆಗಳ ಒಕ್ಕೂಟ ಪರೀಕ್ಷಾ ಪ್ರಾಧಿಕಾರ ಮೊನ್ನೆ ನಡೆಸಿದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ, ಕೂಡಲೇ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದೆ.
ವೃತ್ತಿ ಶಿಕ್ಷಣ ಪ್ರವೇಶ ಬಯಸಿ ಸುಮಾರು 3.5 ಲಕ್ಷ ವಿದ್ಯಾರ್ಥಿಗಳು ಕಳೆದ ಎರಡು ವರ್ಷಗಳಿಂದ ಹಗಲು ರಾತ್ರಿ ಎಂದು ನೋಡದೆ ಕಷ್ಟಪಟ್ಟು ಓದಿದ್ದಾರೆ. ಆದರೆ ಪರೀಕ್ಷೆ ಪ್ರಾಧಿಕಾರ ಇವರ ವಿಷಯದಲ್ಲಿ ಚೆಲ್ಲಾಟ ಮಾಡುತ್ತಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಒಟ್ಟು 240 ಅಂಕಗಳಲ್ಲಿ 46 ಪ್ರಶ್ನೆಗಳು ಪಠ್ಯ ಪುಸ್ತಕದಿಂದ ಹೊರತಾಗಿವೆ. ಇದರಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮರು ಪರೀಕ್ಷೆ ಒಂದೇ ಉಳಿದಿರುವ ಮಾರ್ಗ ಎಂದರು.
ಸರ್ಕಾರ ಕೂಡಲೇ ಮಧ್ಯಪ್ರದೇಶದ ತಪ್ಪಿತಸ್ಥರ ವಿರುದ್ಧ ಕ್ರಮದ ಜೊತೆಗೆ ಮರು ಪರೀಕ್ಷೆಗೆ ಆದೇಶಿಸಬೇಕು. ಇಲ್ಲವಾದರೆ ಕಾನೂನು ಹೋರಾಟ ನಡೆಸಲಿದೆ ಎಂದರು.




