ಉತ್ತರ ಕನ್ನಡ: ಜನಪದ ಕೋಗಿಲೆ ಎಂದೇ ಹೆಸರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನಾಡೋಜ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
2017ರಲ್ಲಿ ಜನಪದ ಹಾಡುಗಳ ಗಾಯನ ಸಾಧನೆಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತ್ತು. ಇವರು ರಾಜ್ಯ, ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದರು.
ವಯೋಸಹಜ ಅನಾರೋಗ್ಯದಿಂದ ಇತ್ತೀಚೆಗೆ ಹಾಸಿಗೆ ಹಿಡಿದಿದ್ದರೂ. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರಿಗೆ ಕೆಲ ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಇಂದು ಮುಂಜಾನೆ ಕಾಲವಶರಾದರು. ಅವರು ಇಬ್ಬರು ಮೊಮ್ಮೊಕ್ಕಳು, ಒಬ್ಬ ಸೊಸೆಯನ್ನು ಅಗಲಿ ಹೋಗಿದ್ದಾರೆ.




