ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದರು.
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದರು.
ಈ ದಾಳಿಯಲ್ಲಿ ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು.
ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದರು.




