ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.
ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.
ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ.
ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.
– ಸಿದ್ದರಾಮಯ್ಯ, ಸಿಎಂ



