ಧಾರವಾಡ: ಸನ್ನದೇತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ, ನೀರು ಮಿಶ್ರಿತ ಮದ್ಯಸಾರ ಮಾರಾಟ, ಹೊರ ರಾಜ್ಯದ ಮದ್ಯ ಮಾರಾಟ, ಕಳ್ಳಭಟ್ಟಿ ಹಾಗೂ ನಕಲಿ ಮದ್ಯ ಮಾರಾಟ ಹಾಗೂ ಯಾವುದೇ ರೀತಿಯ ಮಾದಕ ವಸ್ತುಗಳ ಮಾರಾಟದಂತಹ ಪ್ರಕರಣಗಳಲ್ಲಿ ಭಾಗಿಯಾಗಿ ಅಬಕಾರಿ ಅಪರಾಧಗಳಲ್ಲಿ ತೊಡಗಿದ್ದ ಹಳೆಯ ಆರೋಪಿಗಳ ಚಲನ ವಲನಗಳ ಮೇಲೆ ತೀವ್ರ ನಿಗಾ ವಹಿಸುವ ನಿಟ್ಟಿನಲ್ಲಿ ಮತ್ತು ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಇರುವ ಹಳೆಯ 150 ಆರೋಪಿಗಳ ಪರೇಡ್‍ನ್ನು ನವನಗರದ ಅಬಕಾರಿ ಉಪ ಆಯುಕ್ತರ ಕಚೇರಿ ಆವರಣದಲ್ಲಿ ನಡೆಸಲಾಯಿತು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸದರಿ ಆರೋಪಿಗಳು ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ ಕಾರ್ಯಗಳ ಕುರಿತು ಹಾಗೂ ಈ ಹಿಂದಿನ ಕೆಲಸವನ್ನು ತೊರೆದಿರುವ ಕುರಿತು ವಿಚಾರಣೆ ನಡೆಸಿ, ಅಲ್ಲದೇ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅಕ್ರಮ ಮದ್ಯ ಮಾರಾಟ ಮಾಡದಂತೆ ಅಬಕಾರಿ ಅಪರಾಧಗಳಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆಯನ್ನು ನೀಡಿದರು.
ಹಳೆಯ ಆರೋಪಿಗಳ ಪರೇಡ್ ಕಾರ್ಯಕ್ರಮ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ರಮೇಶ ಕುಮಾರ ಹೆಚ್ ನೇತೃತ್ವದಲ್ಲಿ ನಡೆಸಲಾಯಿತು. ಪರೇಡ್ ನಲ್ಲಿ ಜಿಲ್ಲೆಯ ಉಪ ವಿಭಾಗಗಳ ಅಬಕಾರಿ ಉಪ ಅಧೀಕ್ಷಕರು ಹಾಗೂ ನಿರೀಕ್ಷಕರು ಭಾಗವಹಿಸಿದ್ದರು.




