ಹುಬ್ಬಳ್ಳಿ: ಮುಡಾ ಹಗರಣ ಮರೆಮಾಚಲು ಮುಖ್ಯಮಂತ್ರಿ ದೆಹಲಿಯಲ್ಲಿ ಶಾಸಕರ ಪಪೆರೇಡ್ ಮಾಡಲು ತಯಾರಿ ಮಾಡುತಿದ್ದು, ದೆಹಲಿಯಲ್ಲಿ ಏನೇ ಪೆರೇಡ್ ಮಾಡಲಿ ಬಿಡಲಿ ಅವರಿಗೆ ಬಿಟ್ಟಿದ್ದು. ಈಗಾಗಲೇ ಕಾನೂನು ಹೋರಾಟ ಆರಂಭ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದ ಚೆಂಡು ಕಾನೂನು ಅಂಗಳಕ್ಕೆ ಹೋಗಿದ್ದು, ಕಾನೂನಿನ ಮೂಲಕವೇ ಇದು ಇತ್ಯರ್ಥ ಆಗಬೇಕು. ಏನೆಲ್ಲಾ ಬೆಳವಣಿಗೆ ಆಗುತ್ತವೆ ನೋಡಬೇಕು. ಹೈಕೋರ್ಟ್ ನಲ್ಲಿ ಏನು ತೀರ್ಮಾನ ಆಗುತ್ತದೆ ನೋಡಿಕೊಂಡು ಅದರ ಮೇಲೆ ಮುಂದಿನ ಹೋರಾಟ ನಡೆಸಲಾಗುವುದು. ಮುಖ್ಯಮಂತ್ರಿಗಳು ತಮ್ಮ ಸ್ಥಾನ ಉಳಿಸಿಕೊಳ್ಳಲು ರಾಜಕೀಯ ತಂತ್ರ ಮಾಡುತ್ತಿದ್ದಾರೆ ಎಂದರು.
ಜಿಂದಾಲ್ ಗೆ ಕಡಿಮೆ ದರಕ್ಕೆ ಜಮೀನು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಾಯಕರು ಅಧಿಕಾರ ಇದ್ದಾಗ ಒಂದು ವಿರೋಧ ಪಕ್ಷದಲ್ಲಿ ಇದ್ದಾಗ ಒಂದು ರೀತಿ ನಡೆದುಕೊಳ್ಳುವ ಮೂಲಕ ಎರಡು ನಾಲಿಗೆ ತೋರಿಸುತ್ತಿದ್ದಾರೆ ಎಂದರು.
ಸಚಿವ ಸಂಪುಟದಲ್ಲಿ ಸಹ ವಿರೋಧ ವ್ಯಕ್ತವಾಗಿದ್ದು ಇದರ ಜೊತೆಗೆ ಇದು ಸಾರ್ವಜನಿಕವಾಗಿ ಸಹ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಇದಕ್ಕೆ ವಿರೋಧ ಬಂದಾಗ ನಾವು ಸಹ ಸಚಿವ ಸಂಪುಟದಲ್ಲಿ ಹಿಂದೆ ಪಡೆದುಕೊಂಡೆವು. ಆದರೆ, ಆಗ ಇದೇ ಕಾಂಗ್ರೆಸ್ ನವರು ಇದಕ್ಕೆ ಭಾರೀ ವಿರೋಧ ಮಾಡಿದ್ದರು. ಈಗ ಇವರೇ ಪರಭಾರೆ ಮಾಡಲು ಹೊರಟಿದ್ದಾರೆ. ವಿಪಕ್ಷದದಲ್ಲಿ ಇದ್ದಾಗ ಒಂದು ರೀತಿ, ಆಡಳಿತದಲ್ಲಿ ಇದ್ದಾಗ ಒಂದು ರೀತಿ ನಡೆದುಕೊಳ್ಳತ್ತಿದ್ದಾರೆ ಎಂದರು.
ರಾಜ್ಯಪಾಲರು ಕೆಲವು ಮಸೂದೆಗಳಿಗೆ ಸ್ಪಷ್ಟೀಕರಣ ಕೇಳಿ ವಾಪಾಸ್ ಕಳುಹಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಮಸೂದೆಗೆ ರಾಜ್ಯಪಾಲರು ವಿರೋಧ ವ್ಯಕ್ತಪಡಿಸಿಲ್ಲ. ಯಾವುದೇ ರೀತಿಯಲ್ಲಿ ರಾಜ್ಯಪಾಲರು ಉದ್ದೇಶಪೂರ್ವಕವಾಗಿ ನಡೆದುಕೊಂಡಿಲ್ಲ. ಪ್ರತಿಯೊಂದು ಮಸೂದೆಗೆ ಪ್ರಶ್ನೆ ಕೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾದ ಮಸೂದೆಗಳಿಗೆ ಉತ್ತರ ಕೊಡಿ ಎಂದು ಕೇಳಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗದ ಮಸೂದೆ ತಡೆಹಿಡಿಯುವ ಅಧಿಕಾರ ರಾಜ್ಯಪಾಲರಿಗೆ ಇದ್ದು, ಇಷ್ಟೇ ಅಲ್ಲಾ ಮುಂದೆ ರಾಷ್ಟ್ರಪತಿಗಳಿಗೆ ಸಹ ಕಳುಹಿಸಿ ಕೊಡುವ ಅಧಿಕಾರ ಇದೆ. ಇದು ರಾಜ್ಯಪಾಲರು ಹಾಗೂ ಸರಕಾರದ ನಡುವೆ ಇರುವ ವ್ಯವಹಾರ ಎಂದರು.




