ಭಾರತ ದೇಶದಲ್ಲಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಸ್ಥಾಪಿತವಾದಂತಹ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ಮತ್ತು ಮನ್ನಣೆಯನ್ನ ನೀಡುತ್ತಾ ಬಂದಿರುವುದಕ್ಕೆ ಅನೇಕ ಉದಾಹರಣೆಗಳಿವೆ. ಇದಕ್ಕೆ ಸಾಕ್ಷಿ ಮಹಿಳಾ ಕಾಂಗ್ರೆಸ್ ನಡೆದು ಬಂದ ದಾರಿಯ ಅವಲೋಕನದಲ್ಲಿ ಸಿಗುತ್ತದೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
1940ರಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಪ್ರಮುಖ ಸ್ವತಂತ್ರ ಹೋರಾಟಗಾರರಾಗಿದ್ದ ಶ್ರೀಮತಿ ಸುಚೇತಾ ಕೃಪಲಾನಿ. ಇವರು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಸ್ಥಾಪನೆಗೆ ಕಾರಣಕರ್ತರಾಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ 1917ರಲ್ಲಿ ಅನಿಬೆಸೆಂಟ್ ರವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಮಹಿಳೆಯರು ಒಬ್ಬರು ಈ ಸ್ಥಾನವನ್ನು ಅಲಂಕರಿಸಿದವರಾಗಿದ್ದಾರೆ. ತದನಂತರ 1925 ರಲ್ಲಿ ಶ್ರೀಮತಿ ಸರೋಜಿನಿ ನಾಯ್ಡು ಅವರು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಮೊದಲ ಚುನಾಯಿತ ಅಧ್ಯಕ್ಷರಾಗಿರುತ್ತಾರೆ.
ನಂತರದಲ್ಲಿ ಶ್ರೀಮತಿ ಇಂದಿರಾ ಗಾಂಧಿರವರು, ಶ್ರೀಮತಿ ಸೋನಿಯಾ ಗಾಂಧಿರವರು ಸಹ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ.
1984ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ನ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಇದರಲ್ಲಿ 30,000ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಶ್ರೀಮತಿ ಇಂದಿರಾ ಗಾಂಧಿರವರು ಮತ್ತು ರಾಜೀವ್ ಗಾಂಧಿರವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ಪಕ್ಷದಿಂದ 1963ರಲ್ಲಿ ಉತ್ತರಪ್ರದೇಶದಲ್ಲಿ ಭಾರತದಲ್ಲಿ ಪ್ರಥಮ ಬಾರಿಗೆ ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಮಹಿಳೆಯರೊಬ್ಬರು ಆಯ್ಕೆಯಾಗಿದ್ದರು. ಅವರು ಶ್ರೀಮತಿ ಸುಚೇತಾ ಕೃಪಲಾನಿ. ತದನಂತರ ಒರಿಸ್ಸಾದಲ್ಲಿ ನಂದಿನಿ ಸತ್ಪತಿ , ಶ್ರೀಮತಿ ಶೀಲಾ ದೀಕ್ಷಿತ್ ರವರು ದೆಹಲಿಯ ಮುಖ್ಯಮಂತ್ರಿಯಾಗಿ 15 ವರ್ಷಗಳ ಕಾಲ ಆಡಳಿತವನ್ನು ನಡೆಸಿದ್ದರು. ಇದೇ ರೀತಿಯಲ್ಲಿ ಪಂಜಾಬಿನಲ್ಲೂ ಸಹ ರಾಜಿಂದರ್ ಕೌರ್ ಭಟ್ಟಲ್ ಕೆಲವು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು.
ಶ್ರೀಮತಿ ಇಂದಿರಾ ಗಾಂಧಿರವರು ಪ್ರಧಾನಿಯಾಗುವುದರ ಮೂಲಕ ಪ್ರಥಮ ಮಹಿಳಾ ಪ್ರಧಾನಿಯನ್ನ ದೇಶಕ್ಕೆ ನೀಡಿದಂತಹ ಕೊಡುಗೆ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಅದೇ ರೀತಿಯಲ್ಲಿ ಶ್ರೀಮತಿ ಪ್ರತಿಭಾ ಪಾಟೀಲ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯನ್ನು ಮಾಡಿ ಪ್ರಥಮ ಮಹಿಳಾ ರಾಷ್ಟ್ರಪತಿಯನ್ನು ದೇಶಕ್ಕೆ ನೀಡಿದ ಕೊಡುಗೆಯು ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ .
ರಾಜೀವ್ ಗಾಂಧಿರವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಕೊಡುವ ಸಂವಿಧಾನದ ತಿದ್ದುಪಡಿಯನ್ನು ಮಾಡಿರುತ್ತಾರೆ. ಮುಂದಿನ ದಿನಗಳಲ್ಲಿ ಅನೇಕ ಕಾಂಗ್ರೆಸ್ ಸರ್ಕಾರದ ರಾಜ್ಯಗಳಲ್ಲಿ ಶೇಕಡ 50ರಷ್ಟು ಮೀಸಲಾತಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ.
ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ನೀಡಬೇಕೆಂಬ ಮಸೂದೆಯನ್ನು ಸೋನಿಯಾ ಗಾಂಧಿರವರ ಮಾರ್ಗದರ್ಶನದಲ್ಲಿ ಯುಪಿಎ ಸರ್ಕಾರ ಮಂಡಿಸಿತು. ಇದು ರಾಜ್ಯಸಭೆಯಲ್ಲಿ ಅನುಮೋದನೆಯಾಗಿ ಲೋಕಸಭೆಯಲ್ಲಿ ಅನುಮೋದನೆಗಾಗಿ ಕಳೆದ ಹಲವಾರು ದಶಕಗಳಿಂದ ಕಾಯುತ್ತಲೇ ಇದೆ.
ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣ ಮತ್ತು ಪ್ರಗತಿಗಾಗಿ ಅವರಲ್ಲಿ ಆರ್ಥಿಕ ಶಕ್ತಿಯನ್ನು ತುಂಬುವ ಸಲುವಾಗಿ ಶಕ್ತಿ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದಲ್ಲದೆ ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಲಾಗಿದೆ. ಇವುಗಳಲ್ಲಿ 2013 ರಿಂದ ಎರಡು ಸಾವಿರದ ಹದಿನೆಂಟರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿರುವ ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳು ಮಾನವೀಯ ನೆಲೆಯಲ್ಲಿ ರೂಪುಗೊಂಡಿರುತ್ತವೆ.
ವಿಶ್ವ ಮೆಚ್ಚಿದ ನಾಯಕಿ, ಬಲಿಷ್ಠ ಭಾರತದ ನಿರ್ಮಾಣಕ್ಕೆ ಬುನಾದಿಯಾದವರು, ಬಡಜನರ ಬದುಕಿಗೆ ಭಾಗ್ಯದ ಬಾಗಿಲನ್ನು ತೆರೆದವರು, ಶ್ರೀಮತಿ ಇಂದಿರಾ ಗಾಂಧಿರವರು, ಇವರು ಕಾಂಗ್ರೆಸ್ ಪಕ್ಷದ ದೊಡ್ಡ ಶಕ್ತಿ ಎಂಬುದನ್ನು ಯಾರೂ ಮರೆಯುವಂತಿಲ್ಲ. 1983ರಿಂದ ಮಹಿಳಾ ಕಾಂಗ್ರೆಸ್ ಗೆ ರಾಷ್ಟ್ರಮಟ್ಟದಲ್ಲಿ ಅನೇಕರು ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಇವರುಗಳಲ್ಲಿ ಶ್ರೀಮತಿ ಗಿರಿಜಾ ವ್ಯಾಸ್ ರವರು ಮತ್ತು ಶ್ರೀಮತಿ ಅಂಬಿಕಾ ಸೋನಿರವರು ಕೇಂದ್ರ ಸಂಪುಟದಲ್ಲಿ ಸಚಿವರಾಗಿಯು ಸೇವೆಯನ್ನ ಸಲ್ಲಿಸಿ, ತಮ್ಮದೇ ಆದ ನಾಯಕತ್ವವನ್ನು ನೀಡಿರುತ್ತಾರೆ.
ಇದೇ ಅಕ್ಟೋಬರ್ 17ರಂದು ಕರ್ನಾಟಕ ರಾಜ್ಯದ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಸೌಮ್ಯ ರೆಡ್ಡಿರವರು ಅಧಿಕಾರವನ್ನು ಸ್ವೀಕರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಶಕ್ತಿ ಮಹಿಳಾ ಶಕ್ತಿ, ಇವರ ಮೂಲಕ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಬರಲಿ ಎಂದು ಶುಭವನ್ನು ಹಾರೈಸೋಣ.
- ಕೆ ಎಸ್ ನಾಗರಾಜ್, ಬೆಂಗಳೂರು


