ಬೆಂಗಳೂರು: 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕ್ರಮ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಬಜೆಟ್ ಮಂಡಿಸಿ ಮಾತಾಡಿದ ಅವರು, ಆಡಳಿತ ಸುಧಾರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಆಡಳಿತ ಸುಧಾರಣಾ ಆಯೋಗ 2ರಡಿ ಸ್ವೀಕರಿಸಲಾದ ಶಿಫಾರಸ್ಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿ 7,214 ಸಂಸ್ಥೆಗಳ ಶಾಸನಬದ್ಧ ಸಂಸ್ಥೆಗಳ ಶಾಸನಬದ್ಧ ಲೆಕ್ಕ ಪರಿಶೋಧಕರಾಗಿರುತ್ತಾರೆ. ಇವುಗಳಲ್ಲಿ ಏಕರೂಪತೆ ತರಲು ಅಗತ್ಯ ತಿದ್ದುಪಡಿ ತರಲಾಗುವುದು ಎಂದರು.




