ಮೈಸೂರು: ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೈಸೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್ಟಿಸಿ ಮಾಲೀಕರಿದ್ದು, ಈ ಪೈಕಿ 36 ಲಕ್ಷ ಆರ್ಟಿಸಿಗಳನ್ನು ಮಾತ್ರ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.
ಆರ್ಟಿಸಿಗಳನ್ನು ಆಧಾರ್ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ ಜಮೀನನ್ನು ಮತ್ಯಾರೋ ಮಾರಾಟ ಮಾಡುವಂತಹ ವಂಚನೆಗಳನ್ನು ತಡೆಯಬಹುದು. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್ ಜೋಡಣೆ ಮಾಡಬೇಕು. ಸಾರ್ವಜನಿಕರೂ ಸಹ ತನಮ್ಮ ಜಮೀನಿನ ಮಾಲೀಕತ್ವಕ್ಕೆ ಭದ್ರತೆ ಅಗತ್ಯವಿದ್ದರೆ ಅಭಿಯಾನಕ್ಕೆ ರೈತರು ಮುಂದೆ ಬಂದು ಸಹಕಾರ ನೀಡಬೇಕು. ಇದರ ಮೂಲಕ ನಕಲಿ ವ್ಯವಹಾರ ಆಗುವುದನ್ನು ತಡೆಯಬಹುದು. ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡಬಹುದು ಎಂದು ಕರೆ ನೀಡಿದರು.




