ಮಹಿಳಾ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮಾಡಿ: ಕರ್ನಾಟಕ ಮಹಿಳಾ ಸಂಘರ್ಘ ವೇದಿಕೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಸಂತ್ರಸ್ತರ ಪೂರ್ಣ ವಿಡಿಯೋ ಬಿಡುಗಡೆ ಮಾಡಿದ ವ್ಯಕ್ತಿಗಳನ್ನು ಬಂಧಿಸುವ ಬಗ್ಗೆ ಕರ್ನಾಟಕ ಮಹಿಳಾ ಸಂಘರ್ಷ ವೇದಿಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಸಂಘರ್ಘ ವೇದಿಕೆ ಅಧ್ಯಕ್ಷೆ ಪೂರ್ಣಿಮಾ ದಾಸ್ , ಪ್ರಧಾನ ಕಾರ್ಯದರ್ಶಿ ಪ್ರೇಮ, ಪದಾಧಿಕಾರಿಗಳು ಸೂಕ್ತ ಕ್ರಮಕ್ಕೆ ಮನವಿ ಪತ್ರ ಸಲ್ಲಿಸಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಈ ಕುರಿತು ಪ್ರತಿಕ್ರಿಯೆ ನೀಡಿದ ಪೂರ್ಣಿಮಾ ದಾಸ್, ಹಾಸನ ಜಿಲ್ಲೆಯಲ್ಲಿ ನಡೆದಿರುವ ಪೆನ್ ಡ್ರೈವ್ ಲೈಂಗಿಕ ಹಗರಣ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಹಣ, ಅಧಿಕಾರದ ಅಮಲಿನಿಂದ ಮಹಿಳೆಯರ ಮೇಲೆ ದೌರ್ಜನ್ಯ, ಲೈಂಗಿಕವಾಗಿ ಶೋಷಣೆ ಮಾಡಿದ ಪ್ರಜ್ವಲ್ ರೇವಣ್ಣರನ್ನು ಕೂಡಲೆ ಬಂಧಿಸಬೇಕು ಎಂದು ಒತ್ತಾಯಿಸಿದರು.
ಇಂತಹ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿಕೃತ್ತ ಮನಸ್ಸಿನ ವ್ಯಕ್ತಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮಹಿಳಾ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಪೆನ್ ಡ್ರೈವ್ ಹಗರಣದ ದೂರು ಬಂದ ತತಕ್ಷಣ ಕಾರ್ಯಪ್ರವೃತ್ತರಾದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿರವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು ಎಂದು ಪತ್ರ ಬರೆದರು. ಇದೇ ಕಾರಣದಿಂದ ರಾಜ್ಯ ಸರ್ಕಾರ ಎಸ್.ಐ.ಟಿ. ತನಿಖೆಗೆ ಆದೇಶ ನೀಡಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ಮಹಿಳೆಯರ ಪರ ದಿಟ್ಟ ಧ್ವನಿಯಾಗಿ ನಿಂತಿರುವ ಅವರನ್ನು ನಮ್ಮ ವೇದಿಕೆ ವತಿಯಿಂದ ಅಭಿನಂದಿಸಲಾಗುತ್ತದೆ ಎಂದರು.




