ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ ಪೆನ್ ಡ್ರೈವ್ ಗಳನ್ನು ಪರಿಶೀಲನೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪೆನ್ ಡ್ರೈವ್ ನಲ್ಲಿ ಕಾಣಿಸಿಕೊಂಡಿರುವ ಕೆಲ ಸಂತ್ರಸ್ತ ಮಹಿಳೆಯರನ್ನು ಗುರುತಿಸಿದ್ದು, ಅವರಿಂದ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈಗಾಗಲೇ ನಾಲ್ವರು ಸಂತ್ರಸ್ಥ ಮಹಿಳೆಯರಿಂದ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಅದರ ಆಧಾರದಲ್ಲಿ ತನಿಖೆ ಮುಂದುವರಿಸಿದೆ.
ತನಿಖಾ ತಂಡದ ನೇತೃತ್ವ ವಹಿಸಿರುವ ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ಅವರು ತಮ್ಮ ತಂಡಕ್ಕೆ ಇನ್ನೂ 18 ಅಧಿಕಾರಿಗಳನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ. ಇದರಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ಸೇರಿ ಮೂವರು ಎಸಿಬಿ ಮಟ್ಟದ ಅಧಿಕಾರಿಗಳು, ಮೂವರು ಮಹಿಳಾ ಇನ್ಸ್ಪೆಕ್ಟರ್ ಗಳು ಐದು ಮಂದಿ ಇನ್ಸ್ಪೆಕ್ಟರ್ ಗಳು ಹಾಗೂ ಮೂವರು ಮಹಿಳಾ ಪಿಎಸ್ಐ ಗಳು ನಾಲ್ವರು ಹೆಡ್ ಕಾನ್ಸ್ ಟೇಬಲ್ ಸೇರಿ 18 ಅಧಿಕಾರಿಗಳು ಇದ್ದಾರೆ.




