ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವಿಧಾನಸಭಾ ಕ್ಷೇತ್ರ ಕೆ.ಆರ್.ಪುರಂನ ಹೊರಮಾವು ವಾರ್ಡ್ ಕಾಂಗ್ರೆಸ್ ಪಕ್ಷದ ಕಛೇರಿಯನ್ನ ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ, ಉತ್ತರ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಎಂ.ನರಸಿಂಹಯ್ಯ ಉದ್ಘಾಟನೆ ಮಾಡಿದರು.
ಇದೇ ವೇಳೆ ಮಾತಾಡಿದ ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದ ಜನಕ್ಕೆ ಕೇಂದ್ರ ಮತ್ತು ರಾಜ್ಯ ಬಿ.ಜೆ.ಪಿ. ಸರ್ಕಾರದ ವಿರುದ್ಧ ಭಾರೀ ಅಸಮಾಧಾನವಿದೆ. ಅಚ್ಚೇದೀನ್ ಎಂದರೆ ಇದೇನಾ ಎಂದು ಜನ ಕೇಳುತ್ತಿದ್ದಾರೆ. ಬಿ.ಜೆ.ಪಿ. ಜನವಿರೋಧಿ ಆಡಳಿತದ ವಿರುದ್ಧ ಕಾಂಗ್ರೆಸ್ ಸತತವಾಗಿ ಹೋರಾಡುತ್ತಾ ಬಂದಿದೆ ಎಂದರು.
ಕಾಂಗ್ರೆಸ್ ಜನಪರ ಆಡಳಿತ ನೀಡಿದ ಪಕ್ಷ. ಭಾರತ್ ಜೋಡೋ ಮತ್ತು ಮೇಕೆದಾಟು ಪಾದಯಾತ್ರೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಹುಮಸ್ಸು, ಹುರುಪು ಬಂದಿದೆ. 2023ರ ವಿಧಾನಸಭಾ ಚುನಾವಣೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಮತ್ತು ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಮತಗಳಿಂದ ಜಯಗಳಿಸಲಿದೆ ಎಂದರು.




